ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ಪ್ರಥಮ ಸ್ಥಾನಗಳಿಸಿದೆ.
ಪ್ರಾಥಾಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದರು.
ಫಲಿತಾಂಶದ ಪ್ರಕಾರ ಒಟ್ಟಾರೆ ಹಾಜರಾದವರ ಪೈಕಿ ಶೇ 73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಶೇ 77.88 ರಷ್ಟು ಬಾಲಕಿಯರು ತೇರ್ಗಡೆಯಾದರೆ, ಶೇ 68.22 ರಷ್ಟು ಬಾಲಕರು ಪಾಸಾಗಿದ್ದಾರೆ.
ಫಲಿತಾಂಶದ ಪ್ರಕಾರ ಉಡುಪಿ ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನ (ಶೇ.93.90) ಗಳಿಸಿದರೆ, ಯಾದಗಿರಿ (ಶೇ 48.45) ಕೊನೆಯ ಸ್ಥಾನ ಪಡೆದಿದೆ.
ಕೊಡಗು ಜಿಲ್ಲೆ ನಾಲ್ಕನೇ ಸ್ಥಾನ (ಶೇ 83.84) ಪಡೆದರೆ, ಮೈಸೂರು 12ನೇ ಸ್ಥಾನ (ಶೇ 74.30), ಚಾಮರಾಜನಗರ 13ನೇ ಸ್ಥಾನ (ಶೇ 73.97) ಹಾಗೂ ಮಂಡ್ಯ 14ನೇ ಸ್ಥಾನ (ಶೇ 73.27) ಪಡೆದುಕೊಂಡಿದೆ.
ಇನ್ನು ವೈಯುಕ್ತಿಕ ಅಂಕಗಳಿಕೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಮಂಗಳೂರು ಎಕ್ಸ್‌ಪರ್ಟ್ ಕಾಲೇಜಿನ ವಿದ್ಯಾರ್ಥಿ ಅಮೂಲ್ಯ ಕಾಮತ್ (597/600) ಅಂಕ ಪಡೆದು ಪ್ರಥಮ ಸ್ಥಾನ ಪಡೆದರೆ, ಕಲಾ ವಿಭಾಗದಲ್ಲಿ ಬಳ್ಳಾರಿಯ ಇಂದೂ ಪಿಯು ಕಾಲೇಜಿನ ಸಂಜನಾ ಬಾಯಿ (597) ಮೊದಲ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಕಾಲೇಜಿನ ದೀಪಾಶ್ರೀ (599) ಅಂಕ ಪಡೆದು ಪ್ರಥಮ ಸ್ಥಾನ ಗಳಿಸಿದ್ದಾರೆ.
ಮಧ್ಯಾಹ್ನ 1.30ರ ನಂತರ ವಿದ್ಯಾರ್ಥಿಗಳು https://karresults.nic.in/ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.
ದ್ವಿತೀಯ ಪಿಯುಸಿ ಪರೀಕ್ಷೆ ಕಳೆದ ಮಾರ್ಚ್ 1 ರಿಂಧ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಈ ಬಾರಿ ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…