ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ.
ಈ ಬಾರಿ ಶೇ.86% ವಿದ್ಯಾರ್ಥಿಗಳು ಪಾಸ್ ಆಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರು ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಅಂಕಿ ಅಂಶಗಳು, ಜಿಲ್ಲಾವಾರು ಸಾಧನೆ ಮತ್ತು ಟಾಪರ್‌ಗಳ ವಿವರಗಳನ್ನು ಬಿಡುಗಡೆ ಮಾಡಲಿದ್ದಾರೆ. ಈಗಾಗಲೇ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗಳಿಗೆ ಎಸ್‌ಎಂಎಸ್ ಮೂಲಕ ಫಲಿತಾಂಶದ ಮಾಹಿತಿಯನ್ನು ರವಾನಿಸಲಾಗಿದೆ.





