ರಾಜ್ಯ

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಶೀಘ್ರದಲ್ಲೇ ಕೇಂದ್ರ ಸರ್ಕಾರದ ಅಧಿಕೃತ ಅಪ್ಲಿಕೇಶನ್ ‘ಡಿಜಿಲಾಕರ್’ ನಲ್ಲಿ ಲಭ್ಯವಾಗಲಿದೆ.

ಈ ಕುರಿತು ಎಕ್ಸ್ ಖಾತೆಯಲ್ಲಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿರುವ ಡಿಜಿಲಾಕರ್, ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ 12ನೇ ತರಗತಿಯ ಫಲಿತಾಂಶ 2026 ಶೀಘ್ರದಲ್ಲೇ ಡಿಜಿಲಾಕರ್‌ನಲ್ಲಿ ಲಭ್ಯವಾಗಲಿದೆ. ಯಾವುದೇ ಸಾಲುಗಟ್ಟಿ ನಿಲ್ಲುವ ಅಗತ್ಯವಿಲ್ಲ, ಯಾವುದೇ ಕಾಗದಪತ್ರಗಳ ಜಂಜಾಟವಿಲ್ಲ. ನಿಮ್ಮ ಫಲಿತಾಂಶಗಳನ್ನು ಅತ್ಯಂತ ಸುರಕ್ಷಿತವಾಗಿ ಪಡೆದುಕೊಳ್ಳಿ. ಶೀಘ್ರವೇ ನಿಮ್ಮ ಅಂಕಗಳನ್ನು ಪರಿಶೀಲಿಸಲು ಸಿದ್ಧರಾಗಿರಿ’ ಎಂದು ತಿಳಿಸಿದೆ.

ಫಲಿತಾಂಶ ಪ್ರಕಟವಾದ ತಕ್ಷಣ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಸರ್ವರ್ ಸಮಸ್ಯೆ ಉಂಟಾಗಿ ವಿದ್ಯಾರ್ಥಿಗಳು ಪರದಾಡುವುದು ಸಾಮಾನ್ಯ. ಆದರೆ ಡಿಜಿಲಾಕರ್ ಮೂಲಕ ವಿದ್ಯಾರ್ಥಿಗಳು ಯಾವುದೇ ಅಡೆತಡೆಯಿಲ್ಲದೆ, ಸುಲಭವಾಗಿ ತಮ್ಮ ಅಂಕಪಟ್ಟಿಯನ್ನು ವೀಕ್ಷಿಸಬಹುದು ಮತ್ತು ಅದರ ಡಿಜಿಟಲ್ ಪ್ರತಿಯನ್ನು ತಕ್ಷಣವೇ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಇಲ್ಲಿ ಲಭ್ಯವಾಗುವ ಡಿಜಿಟಲ್ ಅಂಕಪಟ್ಟಿಗಳು ಭೌತಿಕ ಅಂಕಪಟ್ಟಿಗಳಿಗೆ ಸಮನಾದ ಅಧಿಕೃತ ಮಾನ್ಯತೆಯನ್ನು ಹೊಂದಿರುತ್ತವೆ. ಮುಂದಿನ ವ್ಯಾಸಂಗಕ್ಕೆ ಪ್ರವೇಶಾತಿ ಪಡೆಯಲು ಅಥವಾ ಇತರ ಯಾವುದೇ ಅಧಿಕೃತ ಕೆಲಸಗಳಿಗೆ ಈ ಡಿಜಿಟಲ್ ಅಂಕಪಟ್ಟಿಯನ್ನು ನೇರವಾಗಿ ಬಳಸಿಕೊಳ್ಳಬಹುದು. ಶಾಲೆಯಿಂದ ಅಥವಾ ಕಾಲೇಜಿನಿಂದ ಮೂಲ ಅಂಕಪಟ್ಟಿ ಕೈ ಸೇರುವವರೆಗೂ ಕಾಯುವ ಅಗತ್ಯ ಇರುವುದಿಲ್ಲ.

ಡಿಜಿಲಾಕರ್‌ನಲ್ಲಿ ಚೆಕ್ ಮಾಡುವುದು ಹೇಗೆ?
ಮೊದಲಿಗೆ ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಗೂಗಲ್ ಪ್ಲೇ-ಸ್ಟೋರ್ ಅಥವಾ ಆಪಲ್ ಆಪ್ ಸ್ಟೋರ್‌ನಿಂದ ಅಧಿಕೃತ ಡಿಜಿಲಾಕರ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ (ಅಥವಾ ಕಂಪ್ಯೂಟರ್‌ನಲ್ಲಿ digilocker.gov.in ವೆಬ್‌ಸೈಟ್‌ಗೆ ಭೇಟಿ ನೀಡಿ). ಆ್ಯಪ್ ತೆರೆದ ನಂತರ, ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಅದಕ್ಕೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಬಳಸಿ ‘Sign Up’ ಮಾಡಿ. (ಈಗಾಗಲೇ ಖಾತೆ ಇದ್ದರೆ ‘Login’ ಆಗಿ). ಲಾಗಿನ್ ಆದ ಬಳಿಕ, ‘Search’ ಆಯ್ಕೆಗೆ ಹೋಗಿ ‘Karnataka School Examination and Assessment Board’ ಅಥವಾ ‘KSEAB’ ಎಂದು ಮೊದಲು ಟೈಪ್ ಮಾಡಿ. ಅಲ್ಲಿ ಕಾಣುವ ‘Class 12 Passing Certificate’ ಅಥವಾ ‘Marksheet’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಈಗ ನಿಮ್ಮ ದ್ವಿತೀಯ ಪಿಯುಸಿ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪರೀಕ್ಷೆಯ ವರ್ಷವನ್ನು (2026) ಸರಿಯಾಗಿ ನಮೂದಿಸಿ ‘Get Document’ ಬಟನ್ ಒತ್ತಿ. ತಕ್ಷಣವೇ ನಿಮ್ಮ ದ್ವಿತೀಯ ಪಿಯುಸಿ ಅಂಕಪಟ್ಟಿ ಪರದೆಯ ಮೇಲೆ ಮೂಡುತ್ತದೆ. ಮುಂದಿನ ರೆಫರೆನ್ಸ್‌ಗಾಗಿ ಇದನ್ನು ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಬಹುದು.

ಆಂದೋಲನ ಡೆಸ್ಕ್

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

8 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

9 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

9 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

9 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

9 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

9 hours ago