ರಾಜ್ಯ

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ ಎಂದು ಸಚಿವ ಮಧು ಬಂಗಾರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಹಿನ್ನೆಲೆಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 6,32,200 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 5.46,698 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ.

ಈ ಪೈಕಿ 2,32,928 ಬಾಲಕರು, 3,13,770 ಮಂದಿ ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಮಕ್ಕಳಿಗೆ ಫಲಿತಾಂಶ ಮೊದಲು ಕೊಡಬೇಕು ಅಂತಲೇ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟ ಮಾಡಿದ್ದೇವೆ. ಅಂಕಪಟ್ಟಿ ಕೂಡ ಇಂದೇ ಲಭ್ಯವಾಗಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 86.48% ಫಲಿತಾಂಶ ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನು ಫಲಿತಾಂಶದಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಬಂದಿದ್ದು, ಯಾದಗಿರಿಗೆ ಕೊನೆಯ ಸ್ಥಾನ ಬಂದಿದೆ.

ಕೊಡಗು ಜಿಲ್ಲೆಗೆ ಮೂರನೇ ಸ್ಥಾನ ಬಂದಿದ್ದು, ಮಂಡ್ಯಕ್ಕೆ 12ನೇ ಸ್ಥಾನ ಲಭಿಸಿದೆ. ಮೈಸೂರು ಜಿಲ್ಲೆಗೆ 18ನೇ ಸ್ಥಾನ ಲಭಿಸಿದ್ದು, ಚಾಮರಾಜನಗರ ಜಿಲ್ಲೆಗೆ 19ನೇ ಸ್ಥಾನ ಸಿಕ್ಕಿದೆ.

 

ಆಂದೋಲನ ಡೆಸ್ಕ್

Recent Posts

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

2 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

2 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

2 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

3 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

3 hours ago

ರೈತರ ಅಭ್ಯುದಯಕ್ಕೆ ಸರ್ಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ.

ಚಿತ್ತಾಪುರ: ಕಾಂಗ್ರೆಸ್ ಸರ್ಕಾರ ರೈತರ ಅಭ್ಯುದಯಕ್ಕೆ ಶ್ರಮಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನುಡಿದರು.…

3 hours ago