ಉಡುಪಿ: ಸಿದ್ದರಾಮಯ್ಯ ಗ್ಯಾರಂಟಿಗಳಿಂದ ತಮ್ಮ ಕೈ ತಾವೇ ಕಟ್ಟಿ ಹಾಕಿಕೊಂಡಿದ್ದು, ಅವರನ್ನು ನೋಡಿದರೆ ನಮಗೆ ಅಯ್ಯೋ ಪಾಪ ಅನ್ನಿಸುತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ನೀರಾವರಿ ಹಾಗೂ ಲೋಕೋಪಯೋಗಿ ಇಲಾಖೆಯಲ್ಲಿ ಹಣವೇ ಇಲ್ಲ. ವಿದ್ಯುತ್ ಬಿಲ್‌ನ್ನು ಕೂಡ ಕಟ್ಟಲು ಸಾಧ್ಯವಿಲ್ಲದ ಪರಿಸ್ಥಿತಿಗೆ ಬಂದು ನಿಂತಿದೆ. ಸ್ವತಃ ಇಂಧನ ಸಚಿವ ಜಾರ್ಜ್ ಇದನ್ನು ಒಪ್ಪಿಕೊಂಡಿದ್ದಾರೆ. ವಿವಿಧ ಇಲಾಖೆಗಳು 6000 ಕೋಟಿ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಇದು ಸರ್ಕಾರದ ಆಡಳಿತ ವೈಖರಿಗೆ ಹಿಡಿದ ಕೈಗಡಿಯಾರವಾಗಿದೆ ಎಂದು ಕಿಡಿಕಾರಿದರು.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿನಿಮಾ ಇಂಡಸ್ಟ್ರಿಗೆ ಎಚ್ಚರಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಡಿಕೆಶಿ ಹತಾಶೆಯಿಂದ ಈ ರೀತಿ ನಡೆದುಕೊಳ್ಳುತ್ತಿದ್ದಾರೆ. ಪಕ್ಷದಲ್ಲಿ ಗೊಂದಲ, ಸಿಎಂ ಆಗಬೇಕು ಎನ್ನುವ ಆಸೆಯಿಂದ ಈ ರೀತಿ ಮಾಡುತ್ತಿದ್ದಾರೆ. ರಾಜಣ್ಣ ಸಹಿತ ಇತರ ಸಚಿವರ ಹೇಳಿಕೆಯಿಂದ ಇದು ಅರಿವಾಗುತ್ತದೆ. ಡಿಕೆಶಿಯವರು ವಿಚಲಿತರಾಗಿದ್ದಾರೆ ಎಂದರು.
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…
ಕೊಳ್ಳೇಗಾಲ: ಅಕ್ರಮವಾಗಿ ಕೇರಳ ಲಾಟರಿಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ ಮಾಂಬಳ್ಳಿ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಜರುಗಿದೆ.…
ಕೆ.ಬಿ.ರಮೇಶನಾಯಕ ರಾಯಚೂರು, ಮಸ್ಕಿ ತಂಡಗಳಿಗೆ ತರಬೇತಿ; ಸ್ವಚ್ಛ ಶೆಹರ್ ಯೋಜನೆಯಡಿ ಒಡಂಬಡಿಕೆ ಮೈಸೂರು: ಸ್ವಚ್ಛತೆಯಲ್ಲಿ ಹಲವು ಬಾರಿ ದೇಶದ ಗಮನ…