ಬೆಂಗಳೂರು : ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಪೊಲೀಸದ ಕಮಿಷನರ್ ಆಗಿದ್ದ ಬಿ.ದಯಾನಂದ ಅವರನ್ನು ಅಮಾನತು ಮಾಡಲಾಗಿದ್ದು, ಆ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಲಾಗಿದೆ.
1996ರ ಕರ್ನಾಟಕ ಕೆಡರ್‌ನ ಐಪಿಎಸ್ ಅಧಿಕಾರಿ ಆಗಿದ್ದ ಸೀಮಂತ್ ಕುಮಾರ್ ಸಿಂಗ್ ಅವರು ಬಿಎಂಟಿಎಫ್ ಎಡಿಜಿಪಿ ಆಗಿದ್ದರು. 39ನೇ ಪೊಲೀಸ್ ಕಮಿಷನರ್ ಆಗಿ ನೇಮಕವಾಗಿದ್ದಾರೆ.





