ರಾಜ್ಯ

ತೆರಿಗೆ ಪಾವತಿಸದೇ ಸಂಚರಿಸುತ್ತಿದ್ದ 30 ಐಷಾರಾಮಿ ಕಾರುಗಳ ಜಪ್ತಿ

ಸಾರಿಗೆ ಇಲಾಖೆಯ ಅಧಿಕಾರಿಗಳ ಕಾರ್ಯಾಚರಣೆ

ಬೆಂಗಳೂರು:ಬೆಂಗಳೂರು ಸಾರಿಗೆ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ತೆರಿಗೆ ಪಾವತಿಸದೇ ರಾಜ್ಯದಲ್ಲಿ ಸಂಚರಿಸುತ್ತಿದ್ದ ಫೆರಾರಿ, ಪೋರ್ಷೆ, ಬಿಎಂಡಬ್ಲೂ, ಬೆಂಜ್‌, ಔಡಿ, ಔಸ್ಟಿನ್‌, ರೇಂಜ್‌ ರೋವರ್‌ ಸೇರಿದಂತೆ 30 ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.

ಸಾರಿಗೆ ಉಪ ಆಯುಕ್ತರಾದ ಸಿ. ಮಲ್ಲಿಕಾರ್ಜುನ್‌ ಅವರ ನೇತೃತ್ವದಲ್ಲಿ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾಧ ಬಿ. ಶ್ರೀನಿವಾಸ್‌ ಪ್ರಸಾದ್, ದೀಪಕ್‌, ಶ್ರೀನಿವಾಸಪ್ಪ ಮತ್ತು ರಂಜಿತ್‌ ಸೇರಿದಂತೆ 41 ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ವಶಪಡಿಸಿಕೊಂಡಿರುವ ಕಾರುಗಳಿಂದು ಸುಮಾರು 3 ಕೋಟಿ ರೂಪಾಯಿಗಳ ತೆರಿಗೆಯನ್ನು ವಸೂಲಿಗೆ ನೊಟೀಸ್‌ ನೀಡಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

26 mins ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

6 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

6 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

6 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

6 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

6 hours ago