Mysore
29
clear sky

Social Media

ಗುರುವಾರ, 29 ಜನವರಿ 2026
Light
Dark

ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ ಮಾಡಿದ ಹಿರಿಯ ನಟಿಯರು: ಕಾರಣ ಇಷ್ಟೇ

dk shiv kumar (4)

ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹಿಸಿದ ಸ್ಯಾಂಡಲ್‌ವುಡ್‌ ಹಿರಿಯ ನಟಿಯರು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಇತ್ತೀಚೆಗೆ ನಟ ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂಬ ಕೂಗು ಹೆಚ್ಚಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿಯರು ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು.

ಇದನ್ನು ಓದಿ:ರಾಹುಲ್‌ ಗಾಂಧಿಗೆ ನೋಟಿಸ್‌: ಚುನಾವಣಾ ಆಯೋಗದವನ್ನೇ ಪ್ರಶ್ನಿಸಿದ ಡಿಸಿಎಂ ಡಿಕೆಶಿ

ಇದೀಗ ಸ್ಯಾಂಡಲ್‌ವುಡ್‌ ಹಿರಿಯ ನಟಿಯರಾದ ಶೃತಿ, ಜಯಮಾಲಾ ಹಾಗೂ ಮಾಳವಿಕಾ ಅವಿನಾಶ್ ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಗೃಹ ಕಚೇರಿಯಲ್ಲಿ ಭೇಟಿಯಾಗಿ ಮೇರು ನಟ ವಿಷ್ಣುವರ್ಧನ್‌ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಾಗೂ ಅವರ ಸ್ಮಾರಕ ನಿರ್ಮಾಣ ಸಂಬಂಧ ಮನವಿ ಸಲ್ಲಿಸಿದರು.

ಇದೇ ವೇಳೆ ಇತ್ತೀಚೆಗೆ ನಿಧನರಾದ ನಟಿ.ಬಿ.ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು.

Tags:
error: Content is protected !!