dk shiv kumar (4)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹಿಸಿದ ಸ್ಯಾಂಡಲ್‌ವುಡ್ ಹಿರಿಯ ನಟಿಯರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಇತ್ತೀಚೆಗೆ ನಟ ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂಬ ಕೂಗು ಹೆಚ್ಚಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿಯರು ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು.
ಇದನ್ನು ಓದಿ:ರಾಹುಲ್ ಗಾಂಧಿಗೆ ನೋಟಿಸ್: ಚುನಾವಣಾ ಆಯೋಗದವನ್ನೇ ಪ್ರಶ್ನಿಸಿದ ಡಿಸಿಎಂ ಡಿಕೆಶಿ
ಇದೀಗ ಸ್ಯಾಂಡಲ್‌ವುಡ್ ಹಿರಿಯ ನಟಿಯರಾದ ಶೃತಿ, ಜಯಮಾಲಾ ಹಾಗೂ ಮಾಳವಿಕಾ ಅವಿನಾಶ್ ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಗೃಹ ಕಚೇರಿಯಲ್ಲಿ ಭೇಟಿಯಾಗಿ ಮೇರು ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಾಗೂ ಅವರ ಸ್ಮಾರಕ ನಿರ್ಮಾಣ ಸಂಬಂಧ ಮನವಿ ಸಲ್ಲಿಸಿದರು.
ಇದೇ ವೇಳೆ ಇತ್ತೀಚೆಗೆ ನಿಧನರಾದ ನಟಿ.ಬಿ.ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…