ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಎಚ್.ವೈ.ಮೇಟಿ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮೇಟಿ ಅವರನ್ನು ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನಲ್ಲಿದ್ದ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ತೆರಳುತ್ತಿದ್ದ ಆಸ್ಪತ್ರೆಯಲ್ಲಿ ಮೇಟಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲಿದ್ದಾರೆ.





