ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ಹಿರಿಯ ಪತ್ರಕರ್ತರು ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಅವರ ನಿಧನವಾರ್ತೆ ನೋವುಂಟು ಮಾಡಿದೆ.
ಸುದೀರ್ಘ 30 ವರ್ಷಗಳ ತಮ್ಮ ವೃತ್ತಿ ಜೀವನದಲ್ಲಿ ಪತ್ರಿಕಾ ಧರ್ಮಕ್ಕೆ ನಿಷ್ಠರಾಗಿದ್ದರು. ಆಕಾಶವಾಣಿ ಹಾಗೂ ದೂರದರ್ಶನದಲ್ಲಿ ಅರೆಕಾಲಿಕ ಸುದ್ದಿ ಸಂಪಾದಕರಾಗಿ, ವಿವಿಧ ಪತ್ರಿಕೆಗಳಲ್ಲಿ ವರದಿಗಾರರಾಗಿ, ಪ್ರೆಸ್‌ಕ್ಲಬ್ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು.
ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…