ರಾಜ್ಯ

ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡ ಬೊಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿದ್ದು, ಹಿರಿಯ ಪತ್ರಕರ್ತರು ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಅವರ ನಿಧನವಾರ್ತೆ ನೋವುಂಟು ಮಾಡಿದೆ.

ಸುದೀರ್ಘ 30 ವರ್ಷಗಳ ತಮ್ಮ ವೃತ್ತಿ ಜೀವನದಲ್ಲಿ ಪತ್ರಿಕಾ ಧರ್ಮಕ್ಕೆ ನಿಷ್ಠರಾಗಿದ್ದರು. ಆಕಾಶವಾಣಿ ಹಾಗೂ ದೂರದರ್ಶನದಲ್ಲಿ ಅರೆಕಾಲಿಕ ಸುದ್ದಿ ಸಂಪಾದಕರಾಗಿ, ವಿವಿಧ ಪತ್ರಿಕೆಗಳಲ್ಲಿ ವರದಿಗಾರರಾಗಿ, ಪ್ರೆಸ್‌ಕ್ಲಬ್‌ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು.

ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

9 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

9 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

10 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

11 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

11 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

14 hours ago