ಬೆಂಗಳೂರು : ಹಿರಿಯ ಪತ್ರಕರ್ತರು, ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರಾದ ಅರ್ಜುನ್ ದೇವ್ ಅವರು ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಕೆಲಸ ಮಾಡಿದ್ದರು.
ಅವರ ಹುಟ್ಟೂರಾದ ಕೋಲಾರ ಜಿಲ್ಲೆ ಚೌಡದೇನಹಳ್ಳಿಯಲ್ಲಿ ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಕೆಯುಡಬ್ಲೂಜೆ ಸಂತಾಪ: ಹಿರಿಯ ಪತ್ರಕರ್ತರದ ಅರ್ಜುನ್ ದೇವ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಪ್ರಜಾವಾಣಿ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಸಲ್ಲಿಸಿದ್ದ ಸೇವೆ ಅನನ್ಯವಾದದ್ದು. ಪತ್ರಕರ್ತರ ಸಂಘಟನೆಯಲ್ಲಿ ಅವರಿಗಿದ್ದ ಬದ್ಧತೆ, ಸಮಾಜಮುಖಿಯಾಗಿ ತೊಡಗಿಸಿಕೊಳ್ಳುವ ಪರಿ ನಿಜಕ್ಕೂ ಶ್ಲಾಘನೀಯ.
ಸಂಘದ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದ ಅರ್ಜುನ್ ದೇವ್ ಅವರ ನಿಧನದಿಂದ ಸುದ್ದಿಮನೆಗೆ ತುಂಬಲಾರದ ನಷ್ಟವಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಶೋಕ ವ್ಯಕ್ತಪಡಿಸಿದ್ದಾರೆ.
ಮೈಸೂರು: ಸಂಸತ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…