ರಾಜ್ಯ

ಹಿರಿಯ ಪತ್ರಕರ್ತ ಆರ್.ಜಯಕುಮಾರ್ ಇನ್ನಿಲ್ಲ

ಬೆಂಗಳೂರು: ಹಿರಿಯ ಪತ್ರಕರ್ತ ಆರ್.ಜಯಕುಮಾರ್ (64)ಅವರು ಅನಾರೋಗ್ಯದ ಕಾರಣದಿಂದಾಗಿ ಶನಿವಾರ(ಮೇ.25) ಮಧ್ಯಾಹ್ನ ಮೃತಪಟ್ಟಿದ್ದಾರೆ. ಪತ್ನಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ, ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕೊಡಗಿನವರಾದ ಜಯಕುಮಾರ್, ಚಳವಳಿ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು. ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ ಪತ್ರಿಕೆ, ಉದಯ ಟಿವಿ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ರಾಜ್ಯದ ನಾನಾ ಭಾಗದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ವೃತ್ತಿ ಮಾಡಿದ್ದರು.

ಜನಪರ ಹೋರಾಟದಲ್ಲಿ ಭಾಗವಹಿಸಿದ್ದ ಕಾಮ್ರೆಡ್ ಜಯಕುಮಾರ್ ಅವರು ಇತ್ತೀಚೆಗೆ ಗಾಂಧಿ ಮರೆತ ನಾಡಿನಲ್ಲಿ ಮತ್ತು ಕಾಡು ಹಾದಿಯ ಬೆಳಕಿನ ಜಾಡಿನಲ್ಲಿ ಎಂಬ ಎರಡು ಪುಸ್ತಕಗಳನ್ನು ಹೊರತಂದಿದ್ದರು.

ಕೆಯುಡಬ್ಲೂಜೆ ಸಂತಾಪ:

ಹಿರಿಯ ಮತ್ತು ಕ್ರಿಯಾಶೀಲ ಪತ್ರಕರ್ತರಾಗಿದ್ದ ಆರ್.ಜಯಕುಮಾರ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು (ಕೆಯುಡಬ್ಲ್ಯೂಜೆ) ಎಚ್.ಎಸ್.ದೊರೆಸ್ವಾಮಿ ಅವರ ಹೆಸರಿನಲ್ಲಿ ಕೊಡ ಮಾಡುವ ಪ್ರಶಸ್ತಿಗೆ ಆರ್.ಜಯಕುಮಾರ್ ಭಾಜನರಾಗಿದ್ದರು. ಅನಾರೋಗ್ಯದ ಕಾರಣದಿಂದ ಚಿತ್ರದುರ್ಗದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗದ ಕಾರಣ, ಮೈಸೂರಿನ ಅವರ ತೋಟದ ಮನೆಗೆ ಹೋಗಿ ಅಲ್ಲಿ ಕೆಯುಡಬ್ಲೂಜೆ ಪ್ರಶಸ್ತಿ ಪ್ರದಾನ ಮಾಡಿತ್ತು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ಜಯಕುಮಾರ್ ನಿಧನದಿಂದ ಕ್ರೀಯಾಶೀಲ ಪತ್ರಕರ್ತನನ್ನು ಸುದ್ದಿಮನೆ ಕಳೆದುಕೊಂಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ದುಃಖ ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ದೇವರು ಕರುಣಿಸಲಿ ಎಂದು ತಗಡೂರು ಶಿವಕುಮಾರ್ ಪ್ರಾರ್ಥಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

12 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

12 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

12 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

12 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

12 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

13 hours ago