ರಾಜ್ಯ

ಹಿರಿಯ ಸಾಹಿತಿ, ಸಂಶೋಧಕ ಪಿ.ವಿ ನಾರಾಯಣ ನಿಧನ

ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ, ಸಂಶೋಧಕ, ಗೋಕಾಕ್‌ ಚಳುವಳಿಯ ಮುಂಚೂಣಿಯ ನಾಯಕರಾಗಿದ್ದ ಡಾ.ಪಿ.ವಿ ನಾರಾಯಣ ಅವರು (82) ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.

ನಗರದ ಜಯನಗರದಲ್ಲಿರುವ ಅವರ ನಿವಾಸದಲ್ಲಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 3 ಗಂಟೆಯ ನಂತರ ಬನಶಂಕರಿ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ಪಿವಿ ನಾರಾಯಣ ಅವರು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ 1942ರ ಡಿ.18 ರಂದು ಜನಿಸಿದರು. ಮೈಸೂರು ವಿವಿಯಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ಇಂಗ್ಲೀಷ್‌ನಲ್ಲಿ ಸ್ನಾತಕೋತ್ತರ ಪದವಿ, ಬೆಂಗಳೂರು ವಿವಿಯಿಂದ “ವಸನ ಸಾಹಿತ್ಯ: ಒಂದು ಸಾಂಸ್ಕೃತಿಕ ಅಧ್ಯಯನ” ಪ್ರಬಂಧಕ್ಕೆ ಪಿಎಚಹ್‌ಡಿ ಪದವಿ ಪಡೆದಿದ್ದರು.

ಕರ್ನಾಟಕದ ಹಿತಚಿಂತಕರಾಗಿ, ಕನ್ನಡ ಪರ ಹೋರಾಟಗಾರರಾಗಿ, ಚಳುವಳಿಯಲ್ಲಿ ಮುಂಚೂಣಿಯಲ್ಲಿದ್ದರು. ವಿಮರ್ಶೆ, ಕಾಯಕತ್ವ, ಚಂಪೂಕವಿಗಳು, ವಚನ ಚಳುವಳಿ, ವಚನ ವ್ಯಾಸಂಗ, ಪಂಪ ರಾಮಾಯಣ, ಅಂತರ, ವಿಕಾಸ, ಶೋಧನೆ ಸೇರದಂತೆ ಒಟ್ಟು 45ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

11 mins ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

48 mins ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

1 hour ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

1 hour ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

2 hours ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

2 hours ago