ಬೆಂಗಳೂರು: ಹಿರಿಯ ಸಾಹಿತಿ, ಖ್ಯಾತ ಕಥೆಗಾರ ಡಾ.ಮೊಗಳ್ಳಿ ಗಣೇಶ್ ಅವರಿಂದು ಹೊಸಪೇಟೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
1963ರ ಜುಲೈ.1ರಂದು ಚನ್ನಪಟ್ಟಣ ತಾಲ್ಲೂಕಿನ ಸಂತೆಮೊಗೇನಹಳ್ಳಿಯಲ್ಲಿ ಜನಿಸಿದ ಡಾ.ಮೊಗಳ್ಳಿ ಗಣೇಶ್ ಅವರು ಕನ್ನಡದ ಪ್ರಮುಖ ಕಥೆಗಾರ, ಪ್ರಬಂಧಕಾರ, ಕಾದಂಬರಿಕಾರ ಹಾಗೂ ವೈಚಾರಿಕ ಚಿಂತಕರಾಗಿದ್ದರು.
ಹಂಪಿ ಕನ್ನಡ ವಿಶ್ವವಿಶ್ವವಿದ್ಯಾನಿಲಯದ ಜಾನಪದ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದ ಅವರು ಸದ್ಯ ಜಾನಪದ ವಿಭಾಗದ ಮುಖ್ಯಸ್ಥರಾಗಿದ್ದರು.
ಇದನ್ನೂ ಓದಿ:-ಓದುಗರ ಪತ್ರ: ಮಾದಾಪುರ ಕೆಜಿಬಿ ಬ್ಯಾಂಕ್‌ಗೆ ಅಗತ್ಯ ಸಿಬ್ಬಂದಿ ನೇಮಿಸಿ
ಸಾಹಿತಿ ಮೊಗಳ್ಳಿ ಗಣೇಶ್ ಅವರ ನಿಧನಕ್ಕೆ ಸಚಿವ ಶಿವರಾಜ್ ತಂಗಡಗಿ ಸಂತಾಪ ಸೂಚಿಸಿದ್ದು, ಕನ್ನಡ ಸಾಹಿತ್ಯಕ್ಕೆ ಮೊಗಳ್ಳಿ ಗಣೇಶ್ ಅವರ ಕೊಡುಗೆ ಗಮನಾರ್ಹ. ತಮ್ಮ ವಿಶಿಷ್ಟ ಶೈಲಿಯ ಕಥೆಗಳ ಮೂಲಕ ಅವರು ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದವರು. ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿದ್ದ ಅವರು ಸೂರ್ಯನನ್ನು ಬಚ್ಚಿಡಬಹುದೇ? ಮತ್ತು ಅನಾದಿ ಕಾವ್ಯ ಸಂಕಲನಗಳ ಮೂಲಕ ಹೆಸರು ಮಾಡಿದರು ಎಂದು ಸಂತಾಪ ಸೂಚಿಸಿದ್ದಾರೆ.





