ರಾಜ್ಯ

ಹಿರಿಯ ಸಾಹಿತಿ ಮೊಗಳ್ಳಿ ಗಣೇಶ್‌ ನಿಧನ

ಬೆಂಗಳೂರು: ಹಿರಿಯ ಸಾಹಿತಿ, ಖ್ಯಾತ ಕಥೆಗಾರ ಡಾ.ಮೊಗಳ್ಳಿ ಗಣೇಶ್‌ ಅವರಿಂದು ಹೊಸಪೇಟೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

1963ರ ಜುಲೈ.1ರಂದು ಚನ್ನಪಟ್ಟಣ ತಾಲ್ಲೂಕಿನ ಸಂತೆಮೊಗೇನಹಳ್ಳಿಯಲ್ಲಿ ಜನಿಸಿದ ಡಾ.ಮೊಗಳ್ಳಿ ಗಣೇಶ್‌ ಅವರು ಕನ್ನಡದ ಪ್ರಮುಖ ಕಥೆಗಾರ, ಪ್ರಬಂಧಕಾರ, ಕಾದಂಬರಿಕಾರ ಹಾಗೂ ವೈಚಾರಿಕ ಚಿಂತಕರಾಗಿದ್ದರು.

ಹಂಪಿ ಕನ್ನಡ ವಿಶ್ವವಿಶ್ವವಿದ್ಯಾನಿಲಯದ ಜಾನಪದ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದ ಅವರು ಸದ್ಯ ಜಾನಪದ ವಿಭಾಗದ ಮುಖ್ಯಸ್ಥರಾಗಿದ್ದರು.

ಇದನ್ನೂ ಓದಿ:-ಓದುಗರ ಪತ್ರ: ಮಾದಾಪುರ ಕೆಜಿಬಿ ಬ್ಯಾಂಕ್‌ಗೆ ಅಗತ್ಯ ಸಿಬ್ಬಂದಿ ನೇಮಿಸಿ

ಸಾಹಿತಿ ಮೊಗಳ್ಳಿ ಗಣೇಶ್‌ ಅವರ ನಿಧನಕ್ಕೆ ಸಚಿವ ಶಿವರಾಜ್‌ ತಂಗಡಗಿ ಸಂತಾಪ ಸೂಚಿಸಿದ್ದು, ಕನ್ನಡ ಸಾಹಿತ್ಯಕ್ಕೆ ಮೊಗಳ್ಳಿ ಗಣೇಶ್‌ ಅವರ ಕೊಡುಗೆ ಗಮನಾರ್ಹ. ತಮ್ಮ ವಿಶಿಷ್ಟ ಶೈಲಿಯ ಕಥೆಗಳ ಮೂಲಕ ಅವರು ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದವರು. ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿದ್ದ ಅವರು ಸೂರ್ಯನನ್ನು ಬಚ್ಚಿಡಬಹುದೇ? ಮತ್ತು ಅನಾದಿ ಕಾವ್ಯ ಸಂಕಲನಗಳ ಮೂಲಕ ಹೆಸರು ಮಾಡಿದರು ಎಂದು ಸಂತಾಪ ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

5 hours ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

5 hours ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

6 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

7 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

8 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

9 hours ago