Mysore
15
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಹಿರಿಯ ಸಾಹಿತಿ ಡಾ. ನಾ ಡಿಸೋಜ ನಿಧನ

ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ಸಾಗರದ ಹಿರಿಯ ಸಾಹಿತಿ ನಾ. ಡಿಸೋಜ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ 1937ರ ಜೂನ್‌.6ರಂದು ಜನಿಸಿದ್ದ ಡಿಸೋಜ ಅವರು, ಪರಿಸರ ಕಾಳಜಿ ಜೊತೆಗೆ ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ.

ಅಲ್ಲದೇ ಅವರು ಬರೆದಿರುವ ಹಲವು ಕಾದಂಬರಿಗಳು ಸಿನಿಮಾಗಳಾಗಿ ಮೂಡಿಬಂದಿವೆ. ಇವುಗಳಲ್ಲಿ ಕಾಡಿನ ಬೆಂಕಿ ಚಿತ್ರ ರಜತ ಕಮಲ ಪ್ರಶಸ್ತಿಯನ್ನು ಪಡೆದಿದ್ದು, ದ್ವೀಪ ಚಿತ್ರ ಸ್ವರ್ಣ ಕಮಲ ಪ್ರಶಸ್ತಿ ಗಳಿಸಿತ್ತು.

Tags:
error: Content is protected !!