ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ಸಾಗರದ ಹಿರಿಯ ಸಾಹಿತಿ ನಾ. ಡಿಸೋಜ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.
ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ 1937ರ ಜೂನ್.6ರಂದು ಜನಿಸಿದ್ದ ಡಿಸೋಜ ಅವರು, ಪರಿಸರ ಕಾಳಜಿ ಜೊತೆಗೆ ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ.
ಅಲ್ಲದೇ ಅವರು ಬರೆದಿರುವ ಹಲವು ಕಾದಂಬರಿಗಳು ಸಿನಿಮಾಗಳಾಗಿ ಮೂಡಿಬಂದಿವೆ. ಇವುಗಳಲ್ಲಿ ಕಾಡಿನ ಬೆಂಕಿ ಚಿತ್ರ ರಜತ ಕಮಲ ಪ್ರಶಸ್ತಿಯನ್ನು ಪಡೆದಿದ್ದು, ದ್ವೀಪ ಚಿತ್ರ ಸ್ವರ್ಣ ಕಮಲ ಪ್ರಶಸ್ತಿ ಗಳಿಸಿತ್ತು.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…