Mysore
19
clear sky

Social Media

ಶುಕ್ರವಾರ, 30 ಜನವರಿ 2026
Light
Dark

ಪ್ರತ್ಯೇಕ ಅಪಘಾತ : ಮೃತ 14 ಮಂದಿ ಕುಟುಂಬಕ್ಕೆ ತಲಾ 3 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಪ್ರತ್ಯೇಕ ಅಪಘಾತದಲ್ಲಿ ಮೃತಪಟ್ಟ 14 ಮಂದಿಯ ಕುಟುಂಬಗಳಿಗೆ ತಲಾ 3 ಲಕ್ಷ ರೂ.ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೊಸ್ಟ್‌ ಮಾಡಿರುವಾ ಅವರು, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು.
ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು. ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು.

ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Tags:
error: Content is protected !!