ಬೆಂಗಳೂರು: ಪ್ರತ್ಯೇಕ ಅಪಘಾತದಲ್ಲಿ ಮೃತಪಟ್ಟ 14 ಮಂದಿಯ ಕುಟುಂಬಗಳಿಗೆ ತಲಾ 3 ಲಕ್ಷ ರೂ.ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೊಸ್ಟ್ ಮಾಡಿರುವಾ ಅವರು, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು.
ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು. ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು.
ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…