Mysore
21
overcast clouds

Social Media

ಸೋಮವಾರ, 07 ಅಕ್ಟೋಬರ್ 2024
Light
Dark

ಸೆಪ್ಟೆಂಬರ್.‌28ಕ್ಕೆ ಪಿಎಸ್‌ಐ ಪರೀಕ್ಷೆ ಮುಂದೂಡಿಕೆ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಪಿಎಸ್‌ಐ ಪರೀಕ್ಷೆಯನ್ನು ಸೆಪ್ಟೆಂಬರ್.‌22ರ ಬದಲು ಸೆಪ್ಟೆಂಬರ್.‌28ಕ್ಕೆ ನಡೆಸಲು ತೀರ್ಮಾನಿಸಲಾಗಿದೆ.

ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿಕೆ ನೀಡಿದ್ದು, ಯುಪಿಎಸ್‌ಸಿ ಪರೀಕ್ಷೆ ಹಾಗೂ ಪಿಎಸ್‌ಐ ಪರೀಕ್ಷೆ ಒಂದೇ ದಿನ ನಿಗದಿಯಾಗಿತ್ತು. ಈ ವಿಚಾರವಾಗಿ ಎಲ್ಲರೂ ಐಪಿಎಸ್‌ ಪರೀಕ್ಷೆ ಮುಂದೂಡಿಕೆ ಮಾಡಲು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪಿಎಸ್‌ಐ ಪರೀಕ್ಷೆಯನ್ನು ಸೆಪ್ಟೆಂಬರ್.‌28ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ಸೇರಿದಂತೆ ಆರು ಜಿಲ್ಲೆಗಳ ಒಟ್ಟು 164 ಕೇಂದ್ರಗಳಲ್ಲಿ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಪರೀಕೆಯನ್ನು ಸೆಪ್ಟೆಂಬರ್.‌22ರಂದು ನಡೆಸಲು ನಿರ್ಧಾರ ಮಾಡಲಾಗಿತ್ತು.

ಅದೇ ದಿನ ಯುಪಿಎಸ್‌ಸಿ ಪರೀಕ್ಷೆ ನಿಗದಿಯಾಗಿದ್ದರಿಂದ ಕೆಲವರು ಪರೀಕ್ಷೆಯನ್ನು ಮುಂದೂಡಿಕೆ ಮಾಡುವಂತೆ ಸಾಮಾಜಿಕ ಜಾಲತಾಣದಲ್ಲಿ ಒತ್ತಡ ಹಾಕಿದ್ದರು. ಆದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆಯನ್ನು ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ ಎಂದು ಹೇಳಿತ್ತು. ಇದೀಗ ಗೃಹ ಸಚಿವ ಜಿ.ಪರಮೇಶ್ವರ್‌ ಈ ಗೊಂದಲಕ್ಕೆ ತೆರೆ ಎಳೆದಿದ್ದು, ಸೆಪ್ಟೆಂಬರ್.‌28ಕ್ಕೆ ಪಿಎಸ್‌ಐ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ.

 

Tags: