ಬೆಂಗಳೂರು: ಪಿಎಸ್‌ಐ ಪರೀಕ್ಷೆಯನ್ನು ಸೆಪ್ಟೆಂಬರ್.22ರ ಬದಲು ಸೆಪ್ಟೆಂಬರ್.28ಕ್ಕೆ ನಡೆಸಲು ತೀರ್ಮಾನಿಸಲಾಗಿದೆ.
ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದು, ಯುಪಿಎಸ್‌ಸಿ ಪರೀಕ್ಷೆ ಹಾಗೂ ಪಿಎಸ್‌ಐ ಪರೀಕ್ಷೆ ಒಂದೇ ದಿನ ನಿಗದಿಯಾಗಿತ್ತು. ಈ ವಿಚಾರವಾಗಿ ಎಲ್ಲರೂ ಐಪಿಎಸ್ ಪರೀಕ್ಷೆ ಮುಂದೂಡಿಕೆ ಮಾಡಲು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪಿಎಸ್‌ಐ ಪರೀಕ್ಷೆಯನ್ನು ಸೆಪ್ಟೆಂಬರ್.28ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು ಸೇರಿದಂತೆ ಆರು ಜಿಲ್ಲೆಗಳ ಒಟ್ಟು 164 ಕೇಂದ್ರಗಳಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕೆಯನ್ನು ಸೆಪ್ಟೆಂಬರ್.22ರಂದು ನಡೆಸಲು ನಿರ್ಧಾರ ಮಾಡಲಾಗಿತ್ತು.
ಅದೇ ದಿನ ಯುಪಿಎಸ್‌ಸಿ ಪರೀಕ್ಷೆ ನಿಗದಿಯಾಗಿದ್ದರಿಂದ ಕೆಲವರು ಪರೀಕ್ಷೆಯನ್ನು ಮುಂದೂಡಿಕೆ ಮಾಡುವಂತೆ ಸಾಮಾಜಿಕ ಜಾಲತಾಣದಲ್ಲಿ ಒತ್ತಡ ಹಾಕಿದ್ದರು. ಆದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆಯನ್ನು ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ ಎಂದು ಹೇಳಿತ್ತು. ಇದೀಗ ಗೃಹ ಸಚಿವ ಜಿ.ಪರಮೇಶ್ವರ್ ಈ ಗೊಂದಲಕ್ಕೆ ತೆರೆ ಎಳೆದಿದ್ದು, ಸೆಪ್ಟೆಂಬರ್.28ಕ್ಕೆ ಪಿಎಸ್‌ಐ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು…
ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು…
ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್ ಕಾಲೋನಿ ಹಾಗೂ ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್ ಚಿತ್ರಕ್ಕೂ ಪೈರಸಿ…
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ…
ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…