ಬೆಂಗಳೂರು : ನಗರದ ಚಿನ್ನಸ್ವಾಮಿ ಸ್ಟೇಡಿಯಂನ 9ನೇ ಗೇಟ್ ಬಳಿ 3 ಆಟೋ, 3 ಕಾರು, ಬೈಕ್‌ಗಳು ಸೇರಿದಂತೆ 9 ವಾಹನಗಳಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ.
ಆಟೋ ಚಾಲಕನ ಸ್ಥಿತಿ ಗಂಭೀರವಾಗಿದೆ. ಬಿಎಂಟಿಸಿ ಬಸ್ ಚಾಲಕನಿಗೆ ಪಿಡ್ಸ್ ಬಂದಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಬಸ್ ಚಾಲಕ ಕಬ್ಬನ್ಪಾರ್ಕ್ ಸಂಚಾರ ಪೊಲೀಸರ ವಶದಲ್ಲಿದ್ದಾರೆ.





