Mysore
24
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

ವಿಜಯಪುರದಲ್ಲಿ ಸರಣಿ ಭೂಕಂಪನ: 2 ತಿಂಗಳಲ್ಲಿ 11 ಬಾರಿ ಕಂಪನ

ವಿಜಯಪುರ: ಜಿಲ್ಲೆಯಲ್ಲಿ ಸರಣಿ ಭೂಕಂಪನ ಸಂಭವಿಸಿದ್ದು, ಕಳೆದ 2 ತಿಂಗಳ ಅವಧಿಯಲ್ಲಿ 11 ಬಾರಿ ಭೂಮಿ ಕಂಪಿಸಿದೆ. ಇದರಿಂದ ಜನರು ತೀವ್ರ ಭಯಭೀತರಾಗಿದ್ದಾರೆ.

ಕಳೆದ ತಡರಾತ್ರಿ 11.41ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಅದಾದ ಬಳಿಕ ಇಂದು ಬೆಳಿಗ್ಗೆ 5.30ರ ಸುಮಾರಿಗೆ ಭೂಮಿ ಕಂಪಿಸಿದೆ.

ರಿಕ್ಟರ್‌ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿದ್ದು, ಸಿಸಿ ಕ್ಯಾಮರಾದಲ್ಲಿ ಭೂಕಂಪನದ ತೀವ್ರತೆ ದಾಖಲಾಗಿದೆ.

ಸರಣಿ ಭೂಕಂಪನದಿಂದ ವಿಜಯಪುರ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಯಾಗಿದ್ದು, ಪದೇ ಪದೇ ಭೂಮಿ ಕಂಪಿಸಲು ಕಾರಣವೇನು ಎಂದು ವಿಜ್ಞಾನಿಗಳು ಅಧ್ಯಯನ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!