ಬೆಂಗಳೂರು : ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 2025ರ ಶೈಕ್ಷಣಿಕ ಸಾಲಿನ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಸರ್ಕಾರಿ ಖೋಟ ಮೊದಲನೇ ವರ್ಷದ MBBS ಶಿಕ್ಷಣಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೇರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಇದನ್ನು ಓದಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಗೆಲ್ಲಲಿದೆ: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು
ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಸಂಸ್ಥೆಯು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದ ಪ್ರತಿಭಾವಂತ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುತ್ತಿರುವುದು ಪ್ರಶಂಸಾರ್ಹ ಕಾರ್ಯ. ಎಂಬಿಬಿಎಸ್ ಶಿಕ್ಷಣಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಿ ಪ್ರೋತ್ಸಾಹ ನೀಡಲಾಗುತ್ತಿದೆ. ಸಂಸ್ಥೆಯ ರೂವಾರಿಗಳು, ಉತ್ತಮ ಸಾಮಾಜಿಕ ಕೆಲಸದಲ್ಲಿ ತೊಡಗಿಕೊಂಡಿರುವುದು ಅನುಕರಣೀಯವಾದುದು ಎಂದು ಪ್ರಶಂಸಿದರು.
ಗಳಿಸಿದ ಸಂಪತ್ತಿನ ಅಲ್ಪಮೊತ್ತ ಸಮಾಜದ ಒಳಿತಿಗೆ ಬಳಸಿ
ವಿದ್ಯಾರ್ಥಿವೇತನ ಪಡೆಯುವ ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು. ಸಮಾಜದಲ್ಲಿ ಜಾತಿವ್ಯವಸ್ಥೆಯಿಂದ ಅಸಮಾನತೆಯಿದೆ. ಸಮಾನತೆಯನ್ನು ಸಾಧಿಸಿ ಸಮಸಮಾಜವನ್ನು ನಿರ್ಮಿಸಬೇಕಿದೆ. ಇಂದಿನ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಸ್ಥಾನಕ್ಕೇರಿದಾಗ, ಸಮಾಜಿಕ ಚಿಂತನೆಯಿಂದ ದುಡಿಯಬೇಕು. ತಾವು ಗಳಿಸುವ ಸಂಪತ್ತಿನ ಸಣ್ಣ ಪಾಲನ್ನು ಸಮಾಜದ ಒಳಿತಿಗಾಗಿ ಸದ್ಬಳಕೆ ಮಾಡಿ ಎಂದು ಭವಿಷ್ಯದ ವೈದ್ಯರಿಗೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ…
ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.…
ಎಚ್.ಡಿ.ಕೋಟೆ: ಕಬಿನಿ ಜಲಾಶಯವನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಎಚ್.ಡಿ.ಕೋಟೆ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ…
ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ. ಅಬಕಾರಿ…
ಮಡಿಕೇರಿ: ಮನರೇಗಾ ಹೆಸರು ಬದಲಾವಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆ ಖಂಡನೀಯ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು…
ಮಹಾದೇಶ್ ಎಂ ಗೌಡ ಹನೂರು: ನಂಜದೇವನಪುರ ಗ್ರಾಮದಲ್ಲಿ ಸೆರೆಹಿಡಿದಿರುವ ಹುಲಿ ಮರಿಗಳನ್ನು ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ…