ರಾಜ್ಯ

ದಿನಗೂಲಿ ನೌಕರರ ಸೇವೆ ಕಾಯಂಗೆ ಅರ್ಹ: ಹೈಕೋರ್ಟ್‌ ಮಹತ್ವದ ಆದೇಶ

ಬೆಂಗಳೂರು: ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯಲ್ಲಿ ಮಂಜೂರಾಗದ ಹುದ್ದೆಗಳಿಗೆ 10 ವರ್ಷಗಳಿಂದ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದವರು ಕಾಯಂ ಸೇವೆಗೆ ಅರ್ಹರು ಎಂದು ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಈ ಸಂಬಂಧ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಡಕೋಳ ಗ್ರಾಮದ ಶಾಂತಲಕ್ಷ್ಮೀ ಕೋಂ ಗುಂಡೂರಾವ್‌ ಸೇರಿದಂತೆ 30ಕ್ಕೂ ಹೆಚ್ಚು ನೌಕರರು ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ಯಾಮ್‌ ಪ್ರಸಾದ್‌ ಅವರಿದ್ದ ಏಕಸದಸ್ಯ ನ್ಯಾಯಪೀಠವು ಅರ್ಜಿದಾರರನ್ನು ಮೂರು ತಿಂಗಳ ಒಳಗಾಗಿ ಸೂಕ್ತ ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಮೂಲಕ ಅರ್ಜಿದಾರರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ.

ಒಂದೇ ಬಗೆಯ ಉದ್ಯೋಗ ಮಾಡುವವರನ್ನು ಭಿನ್ನ ರೀತಿಯಲ್ಲಿ ನೋಡಲಾಗದು. ಅರ್ಜಿದಾರರು 10 ವರ್ಷಗಳಿಂದ ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದ್ದಾರೆ. ಹಾಗಾಗಿ ಅವರನ್ನು ಹಂಗಾಮಿ ನೌಕರರಾಗಿಯೇ ಮುಂದುವರಿಸಲಾಗದು. ಅವರಿಗೆ ಅರ್ಹ ವೇತನ ಮತ್ತು ಭತ್ಯೆಯನ್ನು ನೀಡಬೇಕಾಗುತ್ತದೆ ಎಂದು ವಿವರ ನೀಡಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

17 mins ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

26 mins ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

49 mins ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

60 mins ago

ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಕಳ್ಳನನ್ನು ಹಿಡಿಯಲು ಹೋದ ಜನರಿಗೆ ಚಾಕು ತೋರಿಸಿ ಪರಾರಿಯಾಗಿರುವ ಘಟನೆ…

1 hour ago

ವಿನಯ್‌ ಕುಲಕರ್ಣಿ ಮೇಲ್ಮನವಿ ಅರ್ಜಿ ವಿಚಾರಣೆ ಸ್ವೀಕರಿಸಿದ ಹೈಕೋರ್ಟ್‌

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಶಾಸಕ…

2 hours ago