ಬೆಂಗಳೂರು: ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯಲ್ಲಿ ಮಂಜೂರಾಗದ ಹುದ್ದೆಗಳಿಗೆ 10 ವರ್ಷಗಳಿಂದ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದವರು ಕಾಯಂ ಸೇವೆಗೆ ಅರ್ಹರು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಈ ಸಂಬಂಧ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಡಕೋಳ ಗ್ರಾಮದ ಶಾಂತಲಕ್ಷ್ಮೀ ಕೋಂ ಗುಂಡೂರಾವ್ ಸೇರಿದಂತೆ 30ಕ್ಕೂ ಹೆಚ್ಚು ನೌಕರರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ಅರ್ಜಿದಾರರನ್ನು ಮೂರು ತಿಂಗಳ ಒಳಗಾಗಿ ಸೂಕ್ತ ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಮೂಲಕ ಅರ್ಜಿದಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ.
ಒಂದೇ ಬಗೆಯ ಉದ್ಯೋಗ ಮಾಡುವವರನ್ನು ಭಿನ್ನ ರೀತಿಯಲ್ಲಿ ನೋಡಲಾಗದು. ಅರ್ಜಿದಾರರು 10 ವರ್ಷಗಳಿಂದ ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದ್ದಾರೆ. ಹಾಗಾಗಿ ಅವರನ್ನು ಹಂಗಾಮಿ ನೌಕರರಾಗಿಯೇ ಮುಂದುವರಿಸಲಾಗದು. ಅವರಿಗೆ ಅರ್ಹ ವೇತನ ಮತ್ತು ಭತ್ಯೆಯನ್ನು ನೀಡಬೇಕಾಗುತ್ತದೆ ಎಂದು ವಿವರ ನೀಡಲಾಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…