ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ ಅಧಿವೇಶನ ಇದಾಗಿದೆ.
ಆದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿವೇಶನದಲ್ಲಿ ಭಾಷಣ ಮಾಡಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ಸಂಘರ್ಷ ಮುಂದುವರಿದೆ.
ಕೇಂದ್ರ ಸರ್ಕಾರದ ವಿರುದ್ಧ ಕೆಲ ಆಕ್ರೋಶ ಪದಗಳು ಭಾಷಣದಲ್ಲಿ ಇದೆ ಎನ್ನಲಾಗಿದ್ದು, ರಾಜ್ಯಪಾಲರು ಸರ್ಕಾರ ಸಿದ್ಧಪಡಿಸಿರುವ ಭಾಷಣದಲ್ಲಿ ಇರುವ ಕೇಂದ್ರ ಸರ್ಕಾರದ ವಿರುದ್ಧ 11 ಪ್ಯಾರಾಗಳನ್ನು ತೆಗೆಯುವಂತೆ ಸೂಚಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಅಧಿವೇಶನದ ಆರಂಭದ ದಿನವಾದ ಇಂದು ರಾಜ್ಯಪಾಲರು ಅಧಿವೇಶನಕ್ಕೆ ಆಗಮಿಸಿ ಭಾಷಣ ಮಾಡುತ್ತಾರೆಯೇ ಎಂಬ ಪ್ರಶ್ನೆ ಮೂಡಿದೆ.




