ಕಲಬುರ್ಗಿ : ನವೆಂಬರ್.2ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ಸಂಬಂಧ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.
ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕಲಬುರ್ಗಿ ಹೈಕೋರ್ಟ್ ವಿಭಾಗೀಯ ಪೀಠ ನವೆಂಬರ್.5ರಂದು ಬೆಂಗಳೂರಿನಲ್ಲಿ ಶಾಂತಿ ಸಭೆ ನಡೆಸಲು ಸೂಚನೆ ನೀಡಿದೆ.
ಹೀಗಾಗಿ ನವೆಂಬರ್.2ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಮುಂದಾಗಿದ್ದ ಆರ್‌ಎಸ್‌ಎಸ್‌ಗೆ ತೀವ್ರ ಹಿನ್ನಡೆಯಾಗಿದೆ.
ಇದನ್ನೂ ಓದಿ:-ರಾಜ್ಯದಲ್ಲಿ ಶೀಘ್ರದಲ್ಲೇ 32 ಸಾವಿರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
ಶಾಂತಿ ಸಭೆ ಅಶಾಂತಿಯಲ್ಲಿ ಅಂತ್ಯಗೊಂಡಿರುವುದರಿಂದ ಅಸಮಾಧಾನಗೊಂಡ ನ್ಯಾಯಾಲಯ ಜಿಲ್ಲಾಡಳಿತ ಯಾವುದೇ ಸೂಕ್ತ ನಿರ್ಧಾರ ಕೈಗೊಳ್ಳದಿರುವುದರಿಂದ ಮತ್ತೊಂದು ಸುತ್ತಿನ ಶಾಂತಿ ಸಭೆ ನಡೆಸಲು ಸೂಚನೆ ನೀಡಿದೆ.
ಮುಂದಿನ ವಿಚಾರಣೆಯನ್ನು ನವೆಂಬರ್.7ಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಮೂಲಕ ನವೆಂಬರ್.2ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಬ್ರೇಕ್ ಹಾಕಲಾಗಿದ್ದು, ನವೆಂಬರ್.5ರ ಶಾಂತಿ ಸಭೆ ಆಧರಿಸಿ ಕೋರ್ಟ್ ತನ್ನ ತೀರ್ಪು ಪ್ರಕಟಿಸಲಿದೆ.





