ರಾಜ್ಯ

ನ.2ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಮುಂದಾಗಿದ್ದ ಆರ್‌ಎಸ್‌ಎಸ್‌ಗೆ ಹಿನ್ನಡೆ

ಕಲಬುರ್ಗಿ : ನವೆಂಬರ್.‌2ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ಸಂಬಂಧ ವಿಚಾರಣೆಯನ್ನು ಕೋರ್ಟ್‌ ಮುಂದೂಡಿದೆ.

ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕಲಬುರ್ಗಿ ಹೈಕೋರ್ಟ್‌ ವಿಭಾಗೀಯ ಪೀಠ ನವೆಂಬರ್.‌5ರಂದು ಬೆಂಗಳೂರಿನಲ್ಲಿ ಶಾಂತಿ ಸಭೆ ನಡೆಸಲು ಸೂಚನೆ ನೀಡಿದೆ.

ಹೀಗಾಗಿ ನವೆಂಬರ್.‌2ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಮುಂದಾಗಿದ್ದ ಆರ್‌ಎಸ್‌ಎಸ್‌ಗೆ ತೀವ್ರ ಹಿನ್ನಡೆಯಾಗಿದೆ.

ಇದನ್ನೂ ಓದಿ:-ರಾಜ್ಯದಲ್ಲಿ ಶೀಘ್ರದಲ್ಲೇ 32 ಸಾವಿರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

ಶಾಂತಿ ಸಭೆ ಅಶಾಂತಿಯಲ್ಲಿ ಅಂತ್ಯಗೊಂಡಿರುವುದರಿಂದ ಅಸಮಾಧಾನಗೊಂಡ ನ್ಯಾಯಾಲಯ ಜಿಲ್ಲಾಡಳಿತ ಯಾವುದೇ ಸೂಕ್ತ ನಿರ್ಧಾರ ಕೈಗೊಳ್ಳದಿರುವುದರಿಂದ ಮತ್ತೊಂದು ಸುತ್ತಿನ ಶಾಂತಿ ಸಭೆ ನಡೆಸಲು ಸೂಚನೆ ನೀಡಿದೆ.

ಮುಂದಿನ ವಿಚಾರಣೆಯನ್ನು ನವೆಂಬರ್.‌7ಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಮೂಲಕ ನವೆಂಬರ್.‌2ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಬ್ರೇಕ್‌ ಹಾಕಲಾಗಿದ್ದು, ನವೆಂಬರ್.‌5ರ ಶಾಂತಿ ಸಭೆ ಆಧರಿಸಿ ಕೋರ್ಟ್‌ ತನ್ನ ತೀರ್ಪು ಪ್ರಕಟಿಸಲಿದೆ.

ಆಂದೋಲನ ಡೆಸ್ಕ್

Recent Posts

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

7 mins ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

18 mins ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

30 mins ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

36 mins ago

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…

52 mins ago

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

58 mins ago