ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಏಳು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ವಾತಾವರಣ ತಂಪಾಗಿರಲಿದೆ ಎಂದು ಮಾಹಿತಿ ನೀಡಿದೆ.
ಇನ್ನು ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.