ಕರ್ನಾಟಕ: ಕರ್ನಾಟಕದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, 16 ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಲಿದೆ ಎಂದು ಮಾಹಿತಿ ನೀಡಿದೆ.
ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಹವಾಮಾನ ಇಲಾಖೆ ಈಗ ಶಾಕಿಂಗ್ ಮಾಹಿತಿಯನ್ನು ಹೊರಹಾಕಿದೆ.
ಇನ್ನೂ ಒಂದು ವಾರಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದು, 16 ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಮಾಹಿತಿ ನೀಡಿದೆ.
ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಕೊಡಗು, ಮೈಸೂರು, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ತುಮಕೂರು, ವಿಜಯನಗರದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನೂ ಮಳೆಯ ಆರ್ಭಟ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾಯ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ.
ರಾಜ್ಯದ ಕೊಡಗು ಜಿಲ್ಲೆಯಲ್ಲಿ ಅಧಿಕ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಇನ್ನೂ ಒಂದು ವಾರಗಳ ಕಾಲ ಮಳೆ ಆರ್ಭಟ ಜೋರಾಗಲಿದ್ದು, ಯಾರೂ ಕೂಡ ಗುಡ್ಡ ಹಾಗೂ ನದಿಯ ಬಳಿ ತೆರಳದಂತೆ ಮನವಿ ಮಾಡಲಾಗಿದೆ.