Mysore
29
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪಶ್ಚಿಮ ಮಧ್ಯ ಬಂಗಾಳಕೊಲ್ಲಿಯಿಂದ ಕೇರಳದವರೆಗೆ ವಾಯುಭಾರ ಕುಸಿತ ಕಂಡುಬಂದಿದ್ದು, ಇದು ಮಳೆ ಬೀಳಲು ಪೂರಕವಾಗಿದೆ.

ಮುಂದಿನ ಏಳು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವಡೆ ಮಳೆಯಾಗಲಿದ್ದು, ಜೂನ್.‌20ರ ವೇಳೆಗೆ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹೇಳಲಾಗಿದೆ.

ಇನ್ನು ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಹಾಸನ, ಶಿವಮೊಗ್ಗ, ತುಮಕೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Tags:
error: Content is protected !!