ರಾಜ್ಯ

ಕನಕಪುರದಲ್ಲಿ ಮಾರಕಾಸ್ತ್ರಗಳಿಂದ ಮಹಿಳೆಯರು ಸೇರಿ ೭ ಜನರ ಮೇಲೆ ಹಲ್ಲೆ

ರಾಮನಗರ:  ೨ ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಮಾರಕಾಸ್ತ್ರಗಳಿಂದ ಮಹಿಳೆಯರು ಸೇರಿ ೭ ಜನರ ಮೇಲೆ  ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಮಾಳಗಾಳು ಗ್ರಾಮದ ಎನ್‌ ಕೆ ಕಾಲೋನಿಯಲ್ಲಿ ನಡೆದಿದೆ.

ಗಡಿಪಾರು ರೌಡಿ ಶೀಟರ್‌ ಹರ್ಷ ಮತ್ತು ತಂಡದಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದ್ದು, ಘಟನೆ ಸಂಬಂಧವಾಗಿ ಕೆಲವರನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದುಕೊಂಡಿದ್ದಾರೆ. ಗಲಾಟೆಯಲ್ಲಿ ಜಿಲ್ಲಾಪಂಚಾಯಿತಿ ಮಾಜಿ ಅಧ್ಯಕ್ಷನ ಕೈ ಕಟ್‌ ಆಗಿದೆ. ಘಟನಾ ಸ್ಥಳಕ್ಕೆ ರಾಮನಗರ ಎಸ್‌ ಕಾರ್ತಿಕ್‌ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ನು ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಲು ಡಿಸಿಗೆ ಮನವಿ ಮಾಡಲಾಗಿದೆ. ಈ ಘಟನೆಯಿಂದ ಬಡಾವಣೆಯಲ್ಲಿ ಆತಂಕ ಶುರುವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್‌ ಭದ್ರತೆ ಒದಗಿಸಲಾಗಿದೆ.

ಇನ್ನು ಈ ಸಂಬಂಧ ಕನಕಪುರ ಟೌನ್‌ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

3 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

3 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago