ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ ಮಂಜು ಕವಿಯುತ್ತಿರುವುದರಿಂದ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ತಜ್ಞರು ಸಲಹೆ ಮಾಡಿದ್ದಾರೆ.
ಡಿಸೆಂಬರ್ ಅಂತ್ಯದವರೆಗೂ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದ್ದು, ಕನಿಷ್ಠ ತಾಪಮಾನ ಹೆಚ್ಚು ಕಡಿಮೆ ಇದೇ ರೀತಿ ಮುಂದುವರಿಯಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ಕನಿಷ್ಠ ತಾಪಮಾನ ೧೦ ರಿಂದ ೧೨ ಡಿ.ಸೆಂ., ದಕ್ಷಿಣ ಒಳನಾಡಿನಲ್ಲಿ ೧೨ ರಿಂದ ೧೪ ಡಿ.ಸೆಂ. ಹಾಗೂ ಕರಾವಳಿ ಭಾಗದಲ್ಲಿ ೧೯ ರಿಂದ ೨೦ ಡಿ.ಸೆಂ. ನಷ್ಟು ಕನಿಷ್ಠ ಉಷ್ಣಾಂಶ ದಾಖಲಾಗುತ್ತಿದ್ದು, ಇನ್ನೂ ಐದಾರು ದಿನಗಳ ಕಾಲ ಇದೇ ರೀತಿ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ಇದನ್ನು ಓದಿ: ಅರಣ್ಯ ಇಲಾಖೆ ಖಾಯಂ ಅಧಿಕಾರಿ, ಸಿಬ್ಬಂದಿಗೆ ಸಿಹಿ ಸುದ್ದಿ : ೧ ಕೋಟಿ ರೂ.ಅಪಘಾತ ವಿಮೆ
ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ ೧೪ ರಿಂದ ೧೫ ಡಿ.ಸೆಂ. ನಷ್ಟು ಕಂಡುಬರುತ್ತಿದೆ. ರಾಜ್ಯದ ಕೆಲವೆಡೆ ಬೆಳಗಿನ ವೇಳೆ ದಟ್ಟವಾದ ಮಂಜು ಆವರಿಸುತ್ತಿದೆ. ಡಿಸೆಂಬರ್‌ನಲ್ಲಿ ಬೆಳಗಿನ ವೇಳೆ ಬಹುತೇಕ ಕಡೆಗಳಲ್ಲಿ ಮಂಜು ಕವಿಯುವುದು ಸರ್ವೆ ಸಾಮಾನ್ಯವಾಗಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಶೀತ ಗಾಳಿ ಮತ್ತ ದಟ್ಟವಾದ ಮಂಜು ಚಳಿಗಾಲದಲ್ಲಿ ಕಂಡುಬರುತ್ತಿರುವುದು ಅಚ್ಚರಿ ಎನಿಸಿದರೂ ಇದು ನಿಸರ್ಗದತ್ತ ಸಹಜ ಪ್ರಕ್ರಿಯೆಯಾಗಿದೆ. ಉತ್ತರ ಭಾರತದ ಬಯಲುಸೀಮೆಯಲ್ಲಿ ಸಾಮಾನ್ಯವಾಗಿ ಇಂತಹ ವಾತಾವರಣ ಕಂಡುಬರುವುದು ವಾಡಿಕೆ. ಆದರೆ ಉಷ್ಣವಲಯವಾದ ಬೆಂಗಳೂರಿನಲ್ಲಿ ಶೀತಗಾಳಿ, ದಟ್ಟ ಮಂಜು ಕಂಡುಬರುತ್ತಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಇದು ಅಸಹಜ ಪ್ರಕ್ರಿಯೆ ಅಲ್ಲ. ಇದು ವಾತಾವರಣದ ಸಹಜ ಪ್ರಕ್ರಿಯೆಯಾಗಿದೆ. ಪ್ರಕೃತಿಯು ಭೌತಿಕ ತತ್ವಗಳನ್ನು ಚಾಚೂ ತಪ್ಪದೇ ಅನುಸರಿಸುತ್ತಿದೆ. ಹೀಗಾಗಿ ಮೇಲ್ನೊಟಕ್ಕೆ ಅಚ್ಚರಿ ಎನ್ನಿಸುತ್ತಿದೆ. ಹಗಲಿನಲ್ಲಿ ನಿರ್ಮಲವಾದ ಆಕಾಶವಿದ್ದು, ಬಿಸಿಲು ಹೆಚ್ಚಾಗಿರುವುದರಿಂದ ರಾತ್ರಿ ವೇಳೆಯಷ್ಟೆ ತೀವ್ರತರವಾಗಿ ವಾತಾವರಣ ತಂಪಾಗುತ್ತದೆ. ಇದರಿಂದ ಚಳಿ ಹೆಚ್ಚಿರುವುದಲ್ಲದೆ ಇಬ್ಬನಿಯೂ ಸಾಕಷ್ಟು ಬೀಳುತ್ತದೆ ಎಂದು ಅವರು ವಿಶ್ಲೇಷಿಸಿದ್ದಾರೆ.
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…
ಬೆಂಗಳೂರು : ಬಾಲಗಂಗಾಧರನಾಥ ಶ್ರೀಗಳ ಧಾರ್ಮಿಕ ಗದ್ದುಗೆ ಲೋಕಾರ್ಪಣೆ ಹಾಗೂ ಡಾ.ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ…
ಬೆಂಗಳೂರು : ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬಳ್ಳಾರಿ : ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ನಡೆದ ಘರ್ಷಣೆ…
ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…