ರಾಜ್ಯ

ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ ಮಂಜು ಕವಿಯುತ್ತಿರುವುದರಿಂದ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ತಜ್ಞರು ಸಲಹೆ ಮಾಡಿದ್ದಾರೆ.

ಡಿಸೆಂಬರ್ ಅಂತ್ಯದವರೆಗೂ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದ್ದು, ಕನಿಷ್ಠ ತಾಪಮಾನ ಹೆಚ್ಚು ಕಡಿಮೆ ಇದೇ ರೀತಿ ಮುಂದುವರಿಯಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಕನಿಷ್ಠ ತಾಪಮಾನ ೧೦ ರಿಂದ ೧೨ ಡಿ.ಸೆಂ., ದಕ್ಷಿಣ ಒಳನಾಡಿನಲ್ಲಿ ೧೨ ರಿಂದ ೧೪ ಡಿ.ಸೆಂ. ಹಾಗೂ ಕರಾವಳಿ ಭಾಗದಲ್ಲಿ ೧೯ ರಿಂದ ೨೦ ಡಿ.ಸೆಂ. ನಷ್ಟು ಕನಿಷ್ಠ ಉಷ್ಣಾಂಶ ದಾಖಲಾಗುತ್ತಿದ್ದು, ಇನ್ನೂ ಐದಾರು ದಿನಗಳ ಕಾಲ ಇದೇ ರೀತಿ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅರಣ್ಯ ಇಲಾಖೆ ಖಾಯಂ ಅಧಿಕಾರಿ, ಸಿಬ್ಬಂದಿಗೆ ಸಿಹಿ ಸುದ್ದಿ : ೧ ಕೋಟಿ ರೂ.ಅಪಘಾತ ವಿಮೆ

ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ ೧೪ ರಿಂದ ೧೫ ಡಿ.ಸೆಂ. ನಷ್ಟು ಕಂಡುಬರುತ್ತಿದೆ. ರಾಜ್ಯದ ಕೆಲವೆಡೆ ಬೆಳಗಿನ ವೇಳೆ ದಟ್ಟವಾದ ಮಂಜು ಆವರಿಸುತ್ತಿದೆ. ಡಿಸೆಂಬರ್‌ನಲ್ಲಿ ಬೆಳಗಿನ ವೇಳೆ ಬಹುತೇಕ ಕಡೆಗಳಲ್ಲಿ ಮಂಜು ಕವಿಯುವುದು ಸರ್ವೆ ಸಾಮಾನ್ಯವಾಗಿದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಶೀತ ಗಾಳಿ ಮತ್ತ ದಟ್ಟವಾದ ಮಂಜು ಚಳಿಗಾಲದಲ್ಲಿ ಕಂಡುಬರುತ್ತಿರುವುದು ಅಚ್ಚರಿ ಎನಿಸಿದರೂ ಇದು ನಿಸರ್ಗದತ್ತ ಸಹಜ ಪ್ರಕ್ರಿಯೆಯಾಗಿದೆ. ಉತ್ತರ ಭಾರತದ ಬಯಲುಸೀಮೆಯಲ್ಲಿ ಸಾಮಾನ್ಯವಾಗಿ ಇಂತಹ ವಾತಾವರಣ ಕಂಡುಬರುವುದು ವಾಡಿಕೆ. ಆದರೆ ಉಷ್ಣವಲಯವಾದ ಬೆಂಗಳೂರಿನಲ್ಲಿ ಶೀತಗಾಳಿ, ದಟ್ಟ ಮಂಜು ಕಂಡುಬರುತ್ತಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಇದು ಅಸಹಜ ಪ್ರಕ್ರಿಯೆ ಅಲ್ಲ. ಇದು ವಾತಾವರಣದ ಸಹಜ ಪ್ರಕ್ರಿಯೆಯಾಗಿದೆ. ಪ್ರಕೃತಿಯು ಭೌತಿಕ ತತ್ವಗಳನ್ನು ಚಾಚೂ ತಪ್ಪದೇ ಅನುಸರಿಸುತ್ತಿದೆ. ಹೀಗಾಗಿ ಮೇಲ್ನೊಟಕ್ಕೆ ಅಚ್ಚರಿ ಎನ್ನಿಸುತ್ತಿದೆ. ಹಗಲಿನಲ್ಲಿ ನಿರ್ಮಲವಾದ ಆಕಾಶವಿದ್ದು, ಬಿಸಿಲು ಹೆಚ್ಚಾಗಿರುವುದರಿಂದ ರಾತ್ರಿ ವೇಳೆಯಷ್ಟೆ ತೀವ್ರತರವಾಗಿ ವಾತಾವರಣ ತಂಪಾಗುತ್ತದೆ. ಇದರಿಂದ ಚಳಿ ಹೆಚ್ಚಿರುವುದಲ್ಲದೆ ಇಬ್ಬನಿಯೂ ಸಾಕಷ್ಟು ಬೀಳುತ್ತದೆ ಎಂದು ಅವರು ವಿಶ್ಲೇಷಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

29 mins ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

31 mins ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

33 mins ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

4 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

4 hours ago