ವಿಜಯಪುರ: ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹದಿಂದಾಗಿ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ನೆರೆ ಅಧ್ಯಯನಕ್ಕೆಂದು ಕೇಂದ್ರ ತಂಡ ಕಳುಹಿಸುವಂತೆ ಕೋರಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಭೀಮಾನದಿ ಪ್ರವಾಹದಿಂದ ಜನರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹವಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ರಾಜ್ಯ ಸರ್ಕಾರ ಈ ಬಗ್ಗೆ ಕಾಳಜಿ ವಹಿಸಿಲ್ಲ. ರಾಜ್ಯ ಸರ್ಕಾರ ಪ್ರವಾಹದ ಬಗ್ಗೆ ಸೂಕ್ತ ಪರಿಹಾರ ಕ್ರಮ ಕೈಗೊಂಡಿಲ್ಲ.
ಈ ಹಿನ್ನೆಲೆಯಲ್ಲಿ ಕೇಂದ್ರದಿಂದ ತುರ್ತು ಪರಿಹಾರ ನೀಡಬೇಕು. ಪ್ರವಾಹ ಅಧ್ಯಯನಕ್ಕೆ ಕೇಂದ್ರದ ತಂಡವನ್ನು ಕಳುಹಿಸಬೇಕು ಎಂದು ಪತ್ರದಲ್ಲಿ ಶಾಸಕ ಯತ್ನಾಳ್ ಮನವಿ ಮಾಡಿದ್ದಾರೆ.





