Mysore
17
broken clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಲೈಂಗಿಕ ದೌರ್ಜನ್ಯ ಪ್ರಕರಣ : ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಬಿಗ್‌ ರಿಲೀಫ್!

ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಬೆಂಗಳೂರಿನ ಕೋರ್ಟ್ ಆರೋಪ ಮುಕ್ತಗೊಳಿಸಿದೆ.

ಇದರಿಂದಾಗಿ ಕಾನೂನು ಹೋರಾಟದಲ್ಲಿ ಎಚ್.ಡಿ ರೇವಣ್ಣಗೆ ಬಹುದೊಡ್ಡ ಗೆಲುವು ಸಿಕ್ಕಂತಾಗಿದೆ.

ತಮ್ಮ ವಿರುದ್ಧ ದಾಖಲಾಗಿರುವ ಐಪಿಸಿ ಸೆಕ್ಷನ್ 354ಎ ಸಮನ್ಸ್ ಅನ್ನು ರದ್ದುಪಡಿಸಬೇಕೆಂದು ಕೋರಿ ಹೆಚ್‍.ಡಿ ರೇವಣ್ಣ ಪರ ಬೆಂಗಳೂರಿನ ವಿಶೇಷ ಜನಪರ ಅರ್ಜಿ ಸಲ್ಲಿಸಿದ್ದರು.

ವಾದ- ಪ್ರತಿವಾದ ಆಲಿಸಿದ 42ನೇ ಎಸಿಎಂಜೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶಿವಕುಮಾರ್ ಅವರಿದ್ದ ಪೀಠ, ರೇವಣ್ಣ ವಿರುದ್ಧ ದಾಖಲಾಗಿದ್ದ ಐಪಿಸಿ ಸೆಕ್ಷನ್ 354 A ಅನ್ನು ರದ್ದುಪಡಿಸಿ ಪ್ರಕರಣದಿಂದ ಆರೋಪ ಮುಕ್ತಗೊಳಿಸಿತು.

ಈಗಾಗಲೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ವಿರುದ್ಧ ದಾಖಲಾಗಿದ್ದ ಐಪಿಸಿ ಸೆಕ್ಷನ್ 354 ಸಮನ್ಸ್ ಅನ್ನು ಈ ಹಿಂದೆ ಹೈಕೋರ್ಟು ರದ್ದುಪಡಿಸಿತ್ತು. ಇದೀಗ ನ್ಯಾಯಾಲಯದಿಂದ ರೇವಣ್ಣಗೆ ಸಿಕ್ಕಿರುವುದರಿಂದ ಬಹುತೇಕ ಅವರು ಪ್ರಕರಣದಿಂದ ಮುಕ್ತರಾಗಿದ್ದಾರೆ.

ಪ್ರಕರಣ ಹಿನ್ನೆಲೆ
ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಕ್ಕೆ ಸಂಬಂದಿಸಿದಂತೆ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್‌.ಡಿ.ರೇವಣ್ಣ ಹಾಗೂ ಅವರ ಮಗ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ 2024ರ ಏಪ್ರಿಲ್ 28ರಂದು ಪ್ರಕರಣ ದಾಖಲಿಸಲಾಗಿತ್ತು. ಸಂತ್ರಸ್ತೆಯ ದೂರು ಆಧರಿಸಿ ಐಪಿಸಿ ಸೆಕ್ಷನ್ 354 2, 506, 509 ರ ಅಡಿ ಪ್ರಕರಣ ದಾಖಲಿಸಲಾಗಿ, ರೇವಣ್ಣ ಮೊದಲನೇ ಆರೋಪಿ ಹಾಗೂ ಪ್ರಜ್ವಲ್ ಅವರನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿತ್ತು.

Tags:
error: Content is protected !!