ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಬೆಂಗಳೂರಿನ ಕೋರ್ಟ್ ಆರೋಪ ಮುಕ್ತಗೊಳಿಸಿದೆ.
ಇದರಿಂದಾಗಿ ಕಾನೂನು ಹೋರಾಟದಲ್ಲಿ ಎಚ್.ಡಿ ರೇವಣ್ಣಗೆ ಬಹುದೊಡ್ಡ ಗೆಲುವು ಸಿಕ್ಕಂತಾಗಿದೆ.
ತಮ್ಮ ವಿರುದ್ಧ ದಾಖಲಾಗಿರುವ ಐಪಿಸಿ ಸೆಕ್ಷನ್ 354ಎ ಸಮನ್ಸ್ ಅನ್ನು ರದ್ದುಪಡಿಸಬೇಕೆಂದು ಕೋರಿ ಹೆಚ್.ಡಿ ರೇವಣ್ಣ ಪರ ಬೆಂಗಳೂರಿನ ವಿಶೇಷ ಜನಪರ ಅರ್ಜಿ ಸಲ್ಲಿಸಿದ್ದರು.
ವಾದ- ಪ್ರತಿವಾದ ಆಲಿಸಿದ 42ನೇ ಎಸಿಎಂಜೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶಿವಕುಮಾರ್ ಅವರಿದ್ದ ಪೀಠ, ರೇವಣ್ಣ ವಿರುದ್ಧ ದಾಖಲಾಗಿದ್ದ ಐಪಿಸಿ ಸೆಕ್ಷನ್ 354 A ಅನ್ನು ರದ್ದುಪಡಿಸಿ ಪ್ರಕರಣದಿಂದ ಆರೋಪ ಮುಕ್ತಗೊಳಿಸಿತು.
ಈಗಾಗಲೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ವಿರುದ್ಧ ದಾಖಲಾಗಿದ್ದ ಐಪಿಸಿ ಸೆಕ್ಷನ್ 354 ಸಮನ್ಸ್ ಅನ್ನು ಈ ಹಿಂದೆ ಹೈಕೋರ್ಟು ರದ್ದುಪಡಿಸಿತ್ತು. ಇದೀಗ ನ್ಯಾಯಾಲಯದಿಂದ ರೇವಣ್ಣಗೆ ಸಿಕ್ಕಿರುವುದರಿಂದ ಬಹುತೇಕ ಅವರು ಪ್ರಕರಣದಿಂದ ಮುಕ್ತರಾಗಿದ್ದಾರೆ.
ಪ್ರಕರಣ ಹಿನ್ನೆಲೆ
ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಕ್ಕೆ ಸಂಬಂದಿಸಿದಂತೆ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ.ರೇವಣ್ಣ ಹಾಗೂ ಅವರ ಮಗ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ 2024ರ ಏಪ್ರಿಲ್ 28ರಂದು ಪ್ರಕರಣ ದಾಖಲಿಸಲಾಗಿತ್ತು. ಸಂತ್ರಸ್ತೆಯ ದೂರು ಆಧರಿಸಿ ಐಪಿಸಿ ಸೆಕ್ಷನ್ 354 2, 506, 509 ರ ಅಡಿ ಪ್ರಕರಣ ದಾಖಲಿಸಲಾಗಿ, ರೇವಣ್ಣ ಮೊದಲನೇ ಆರೋಪಿ ಹಾಗೂ ಪ್ರಜ್ವಲ್ ಅವರನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿತ್ತು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…