Mysore
20
overcast clouds
Light
Dark

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್‌

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ವಜಾಗೊಳಿಸಿ ಬುಧವಾರ ಆದೇಶ ಹೊರಡಿಸಿದೆ.

ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿ ಜಡ್ಟ್‌ ಸಂತೋಷ್‌ ಗಜಾನನ ಭಟ್‌ ವಜಾಗೊಳಿಸಿದ್ದಾರೆ.

ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಅತ್ಯಾಚಾರ ಪ್ರಕರಣದಲ್ಲಿ ದಾಖಲಾಗಿತ್ತು. ಇತ್ತೀಚೆಗೆ ಕೂಡ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲರ್‌ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆಗಲೂ ವಿಚಾರಣೆ ಮಾಡಿದ್ದ ಜಡ್ಜ್‌ ಸಂತೋಷ್‌ ಗಜಾನನ ಭಟ್‌ ಅರ್ಜಿಯನ್ನು ವಜಾಗೊಳಿಸಿದ್ದರು.