ಬೆಂಗಳೂರು: ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಧನದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಅರ್ಜಿ ವಿಚಾರಣೆಯನ್ನು ಜನವರಿ.6ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಈ ಕುರಿತು ಇಂದು(ಜನವರಿ.4) ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವೂ ಅರ್ಜಿ ವಿಚಾರಣೆ ನಡೆಸಿದ್ದು, ಎಸ್‌ಐಟಿ ಅಧಿಕಾರಿಗಳ ಪರ ವಕೀಲ ಕೋರ್ಟ್‌ಗೆ ಹಾಜರಾಗದಿದ್ದಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಹಾಗೂ ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಇಂದು ಪೊಲೀಸರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆದರೆ ಎಸ್‌ಐಟಿ ಪರ ಎಸ್‌ಪಿಪಿ ಗೈರು ಹಾಜರಾದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.
ಏನಿದು ಪ್ರಕರಣ?
ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಆತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಆರು ತಿಂಗಳ ಹಿಂದೆ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಅಂದಿನಿಂದ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದರು.