ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಎಸ್‌ಐಟಿ ಅಧಿಕಾರಿಗಳು 2,144 ಪುಟಗಳ ದೋಷಾರೋಪ ಪಟ್ಟಿಯನ್ನು 42ನೇ ಜನಪ್ರತಿನಿಧಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಕುರಿತಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಸುಮಾರಾಣಿ ಅವರು 137 ಸಾಕ್ಷಿಗಳ ಹೇಳಿಕೆ ಸೇರಿ 2144 ಪುಟಗಳ ದೋಷಾರೋಪ ಪಟ್ಟಿಯನ್ನು 42ನೇ ವಿಶೇಷ ಜನಪ್ರತಿನಿಗಳ ಕೋರ್ಟ್‌ಗೆ ಎಸ್‌ಐಟಿ ಸಲ್ಲಿಕೆ ಮಾಡಿದ್ದಾರೆ.
ಇನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಜುಲೈ 24ರಂದು ವಜಾಗೊಂಡಿತ್ತು. ಸದ್ಯ ಆರೋಪಿ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ.
ಏನಿದು ಪ್ರಕರಣ?
ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದ ಭೀತಿಯಿಂದ 35 ದಿನ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಮೂರು ತಿಂಗಳ ಹಿಂದೆ ಬೆಂಗಳೂರಿಗೆ ವಾಪಸಾದಾಗ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅದನ್ನು ಚಿತ್ರೀಕರಿಸಿದ ಆರೋಪ ಪ್ರಜ್ವಲ್ ವಿರುದ್ದ ಕೇಳಿ ಬಂದಿದೆ. ಆರೋಪಿ ಪ್ರಜ್ವಲ್ ರೇವಣ್ಣ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇನ್ನು ಇನ್ನೊಂದು ಕಡೆ ಹೆಚ್ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದವು.
ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣ, ಕೆ.ಆರ್.ನಗರದ ಕಿಡ್ನ್ಯಾಪ್ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಪ್ರಜ್ವಲ್‌ರನ್ನ ಎಸ್‌ಐಟಿ ಕಸ್ಟಡಿಗೆ ಪಡೆದಿತ್ತು. ಈ ಎರಡೂ ಕೇಸ್‌ಗಳಲ್ಲಿ ವಿಚಾರಣೆ ಮುಗಿದಿರೋ ಕಾರಣಕ್ಕೆ ಪ್ರಜ್ವಲ್ ರೇವಣ್ಣರನ್ನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.
ಇನ್ನು ಮೈಸೂರು ಜಿಲ್ಲೆಯ ಕೆಆರ್ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ 9 ಆರೋಪಿಗಳಿಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ನಿಂದ ಸಮನ್ಸ್ಜಾರಿ ಮಾಡಲಾಗಿದೆ.
ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…
315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…
ಲಂಡನ್ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…