ಬೆಂಗಳೂರು: ಮೆಟ್ರೋ ಅಧಿಕಾರಿಯಿಂದಲೇ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.
ಅಧಿಕಾರಿಯೊಬ್ಬರು ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಸುಬ್ರಮ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಅಧಿಕಾರಿ ಗಜೇಂದ್ರ ಎಂಬುವವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಈ ಸಂಬಂಧ FIR ದಾಖಲಾಗಿದೆ ಎನ್ನಲಾಗುತ್ತಿದೆ.
ಅಧಿಕಾರಿ ಗಜೇಂದ್ರ ಮಹಿಳಾ ಸಿಬ್ಬಂದಿಗಳಿಗೆ ಅಶ್ಲೀಲ ಪದಗಳಿಂದ ನಿಂದಿಸುವುದಲ್ಲದೆ ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಅಲ್ಲದೆ ತನಗೇ ಸಹಕರಿಸದ ಸಿಬ್ಬಂದಿಯನ್ನು ಬೇರೆಡೆ ವರ್ಗಾವಣೆ ಮಾಡುವುದಾಗಿ ಬೆದರಿಸಿದ್ದಾನೆ.
ಸೆಕ್ಯೂರಿಟಿ ಏಜೆನ್ಸಿ ಮಾಲೀಕನಿಂದಲೂ ಸಹಕರಿಸುವಂತೆ ಒತ್ತಾಯ ಮಾಡಿದ ಆರೋಪ ಕೇಳಿ ಬಂದಿದೆ.
ಸಹಕರಿಸಿ ಇಲ್ಲ ಕೆಲಸದಿಂದ ತೆಗೆಯುತ್ತೇನೆ ಅಂತಾರೆ ಎಂದು ಮಹಿಳಾ ಸಿಬ್ಬಂದಿ ಪೊಲೀಸರು ಹಾಗೂ ಬಿಎಂಆರ್‌ಸಿಎಲ್ ಅಧಿಕಾರಿಗಳಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ