ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್‌ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು, ಈ ಸಂಬಂಧ ಕೇಸ್ ದಾಖಲಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ದೂರು ದಾಖಲಿಸಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ, ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್ ಅವರಿಗೆ ದೂರು ನೀಡಿದ್ದಾರೆ. ಆರ್ಯನ್ ಖಾನ್ ಪಬ್‌ನಲ್ಲಿ ಇದ್ದವರನ್ನು ವಿಚಾರಣೆ ನಡೆಸುವಂತೆ ವಕೀಲರು ದೂರು ನೀಡಿದ್ದಾರೆ.
ಇದನ್ನೂ ಓದಿ: ಕೋಳಿ ಮೊಟ್ಟೆಗೆ ಬರ: ಏರಿದ ದರ
ಪಬ್‌ನಲ್ಲಿ ಮಿಡಲ್ ಫಿಂಗರ್ ತೋರಿಸಿ ಸಾರ್ವಜನಿಕವಾಗಿ ದುರ್ವತನೆ ತೋರಿದ್ದು, ವಿವಾದಕ್ಕೆ ಕಾರಣವಾಗಿದೆ. ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಅಭಿಮಾನಿಗಳತ್ತ ಕೈ ಬೀಸುವಾಗ ಶಾರುಖ್ ಖಾನ್ ಪುತ್ರ ಮಿಡಲ್ ಫಿಂಗಲ್ ತೋರಿಸುವಾಗ ಅಸಭ್ಯವಾಗಿ ವರ್ತಿಸಿದ್ದಾರೆ. ಬೆಂಗಳೂರಿನಲ್ಲಿ ನವೆಂಬರ್.28ರಂದು ಈ ಘಟನೆ ನಡೆದಿದೆ. ಆರ್ಯನ್ ಖಾನ್ ಜೊತೆ ಜೈದ್ ಖಾನ್, ಮೊಹಮ್ಮದ್ ನಲಪಾಡ್ ಕೂಡ ಇದ್ದರು.





