ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ದುರುಪಯೋಗವಾಗುತ್ತಿರುವ ಆರೋಪ ಕೇಳಿಬಂದಿದೆ. ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ. ಆದರೆ ಕೆಲ ಕಂಡಕ್ಟರ್ ಗಳು ಮಹಿಳಾ ಪ್ರಯಾಣಿಕರು ಇಲ್ಲದೇ ಇದ್ದರೂ ಟಿಕೆಟ್ ಬರೆಯುವುದು ಜೊತೆಗೆ ಒಂದಕ್ಕಿಂತ ಹೆಚ್ಚು ಟಿಕೆಟ್ ನೀಡಿ ದುಡ್ಡು ಮಾಡುವ ಕೃತ್ಯ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈಗಾಗಿ ಕೆಎಸ್ಆರ್ಟಿಸಿ ಸೇರಿದಂತೆ ಇತರ ಸಾರಿಗೆ ನಿಗಮಗಳು ಎಚ್ಚೆತ್ತುಕೊಂಡಿದ್ದು ಕಂಡಕ್ಟರ್ ಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಬಸ್ನಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಇಲ್ಲದಿದ್ದರೂ ಹೆಚ್ಚು ಟಿಕೆಟ್ ವಿತರಣೆ ಮಾಡಿದ್ದಲ್ಲೆ ಆದಲ್ಲಿ ಕಠಿಣವಾದ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ವಾರ್ನಿಂಗ್ ಕೊಟ್ಟಿದ್ದಾರೆ.
ಅಲ್ಲದೆ ತಪ್ಪಿತಸ್ಥ ಕಂಡಕ್ಟರ್ ಗಳಿಗೆ ಯಾವ ರೀತಿ ಶಿಕ್ಷೆ ವಿಧಿಸಲಾಗುತ್ತದೆ ಎಂಬುವುರ ಬಗ್ಗೆ ಆದೇಶ ಹೊರಡಿಸಿದ್ದಾರೆ.
೧) ಉಚಿತ ಮಹಿಳಾ ಟಿಕೆಟ್ ಪ್ರಕರಣದಲ್ಲಿ ನಿಯಮ 22ರ ಅಡಿಯಲ್ಲಿ ಶಿಸ್ತು ಕ್ರಮ
೨) 2 ಕ್ಕಿಂತ ಹೆಚ್ಚಿನ ಉಚಿತ ಮಹಿಳಾ ಟಿಕೆಟ್ ಪ್ರಕರಣದಲ್ಲಿ ಸೋರಿಕೆ ಮೊತ್ತದ ಮೇಲೆ ಪ್ರಕರಣ ದಾಖಲಿಸಿ ಕ್ರಮ
೩) ಮಹಿಳಾ ಉಚಿತ ಟಿಕೆಟ್ ವಿತರಿಸದೇ ಇದ್ದಲ್ಲಿ ಶಿಸ್ತು ಕ್ರಮ
೪) 2 ಕ್ಕಿಂತ ಹೆಚ್ಚಿನ ಟಿಕೆಟ್ ನೀಡದೇ ಇರುವ ಪಕ್ಷದಲ್ಲಿ ನಿಯಮಾನುಸಾರ ಕ್ರಮ
೫) ಇಂತಹ ಪ್ರಕರಣದಲ್ಲಿ ಪ್ರಯಾಣಿಕರಿಂದ ದಂಡ ವಸೂಲಿ ಮಾಡದೇ, ನ್ಯೂನತೆಗಳ ವಿವರಗಳೊಂದಿಗೆ ನಿರ್ವಾಹಕರಿಗೆ ಮೆಮೋ ನೀಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆದೇಶಿಸಿದೆ.
ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್.28) 120 ಕೋಟಿ ರೂ…
ಮೈಸೂರು : ನಗರದ ಹೊರ ವರ್ತುಲ ರಸ್ತೆಯಲ್ಲಿ ಹಗಲು ವೇಳೆ ಸಾಕಷ್ಟು ವಾಹನಗಳು ಹಾಗೂ ಸಾರ್ವಜನಿಕರು ಓಡಾಡಲು ಸ್ವಚ್ಛತೆ ಕೊರತೆ…
ಬೆಂಗಳೂರು: ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್ ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್ ಕುಮಾರ್…
ಕಠ್ಮಂಡು: ಕಳೆದ ವರ್ಷ ದೇಶದಾದ್ಯಂತ ನಡೆದಿದ್ದ ಜನರೇಷನ್ ಝಡ್ ಪ್ರತಿಭಟನೆಗೆ ಸಂಬಂಧಿಸಿದಂತೆ ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಹಾಗೂ…
ಮೇಲುಕೋಟೆ : ವಿಶ್ವವಿಖ್ಯಾತ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಕಿರೀಟಧಾರಣಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಪೂರ್ವಭಾವಿಯಾಗಿ, ಜಿಲ್ಲಾ ಖಜಾನೆಯಿಂದ…
ಎಚ್.ಡಿ.ಕೋಟೆ : ಪತಿ ಮೃತಪಟ್ಟ ಮಾರನೇ ದಿನವೇ ಶಿಕ್ಷಕಿಯೊಬ್ಬರು ಶಾಲೆಗೆ ಹಾಜರಾಗಿ ಕರ್ತವ್ಯ ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಂಪಾಪುರ ಸಮೀಪದ…