ಬೆಂಗಳೂರು: ಕರ್ನಾಟದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆಗಳನ್ನು ಮತ ಪಡೆಯುವುದಕ್ಕಾಗಿ ಮಾಡಿದ್ದಲ್ಲ. ಇದನ್ನು ಲೋಕಸಭಾ ಚುನಾವಣೆ ವರೆಗೆ ಎಂದು ನಿಗದಿ ಮಾಡಿಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರೆಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ನಿಲ್ಲಲಿದೆ ಎಂಬ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ. ಲೋಕಸಭಾ ಚುನಾವಣೆಯವರೆಗೆ ಅಂತ ನಿಗದಿ ಮಾಡಿಲ್ಲ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿದ್ದ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದರು. ಅವರಿಗೆ ಸಹಾಯ ಮಾಡೋದಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಇದರಿಂದ ಬಡ, ಮಧ್ಯಮ ವರ್ಗದವರಿಗೆ ಸಹಾಯ ಆಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಗಾಗಿ ಬಜೆಟ್ ನಲ್ಲಿ ಸುಮಾರು ₹5,500 ಕೋಟಿ ಮೀಸಲಿಟ್ಟಿದ್ದಾರೆ. ಶಕ್ತಿ ಯೋಜನೆಗೆ ಯಾವುದೇ ಸಮಸ್ಯೆ ಇಲ್ಲ.
ನಮ್ಮ ಕಾಂಗ್ರೆಸ್ ಸರ್ಕಾರ ಇರುವವರೆಗೂ ಶಕ್ತಿ ಯೋಜನೆ ಇರುತ್ತೆ. ಯಾರಿಗೂ ಅನುಮಾನ ಬೇಡ. ಮುಂದೆಯೂ ಸಹ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಆಗಲೂ ಶಕ್ತಿ ಯೋಜನೆ ಇರುತ್ತದೆ ಎಂದು ಬರೆದುಕೊಂಡಿದ್ದಾರೆ.