ರಾಜ್ಯ

ಯಾವುದೇ ಕಾರಣಕ್ಕೂ ಶಕ್ತಿ ಗ್ಯಾರೆಂಟಿ ಯೋಜನೆ ನಿಲ್ಲುವುದಿಲ್ಲ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಕರ್ನಾಟದಲ್ಲಿ ಕಾಂಗ್ರೆಸ್‌ ಸರ್ಕಾರ ಗ್ಯಾರೆಂಟಿ ಯೋಜನೆಗಳನ್ನು ಮತ ಪಡೆಯುವುದಕ್ಕಾಗಿ ಮಾಡಿದ್ದಲ್ಲ. ಇದನ್ನು ಲೋಕಸಭಾ ಚುನಾವಣೆ ವರೆಗೆ ಎಂದು ನಿಗದಿ ಮಾಡಿಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರೆಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ನಿಲ್ಲಲಿದೆ ಎಂಬ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ. ಲೋಕಸಭಾ ಚುನಾವಣೆಯವರೆಗೆ ಅಂತ ನಿಗದಿ ಮಾಡಿಲ್ಲ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿದ್ದ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದರು. ಅವರಿಗೆ ಸಹಾಯ ಮಾಡೋದಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಇದರಿಂದ ಬಡ, ಮಧ್ಯಮ ವರ್ಗದವರಿಗೆ ಸಹಾಯ ಆಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಗಾಗಿ ಬಜೆಟ್‌ ನಲ್ಲಿ ಸುಮಾರು ₹5,500 ಕೋಟಿ ಮೀಸಲಿಟ್ಟಿದ್ದಾರೆ. ಶಕ್ತಿ ಯೋಜನೆಗೆ ಯಾವುದೇ ಸಮಸ್ಯೆ ಇಲ್ಲ.

ನಮ್ಮ ಕಾಂಗ್ರೆಸ್ ಸರ್ಕಾರ ಇರುವವರೆಗೂ ಶಕ್ತಿ ಯೋಜನೆ ಇರುತ್ತೆ. ಯಾರಿಗೂ ಅನುಮಾನ ಬೇಡ. ಮುಂದೆಯೂ ಸಹ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಆಗಲೂ ಶಕ್ತಿ ಯೋಜನೆ ಇರುತ್ತದೆ ಎಂದು ಬರೆದುಕೊಂಡಿದ್ದಾರೆ.

https://x.com/RLR_BTM/status/1799470334875459616

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

26 mins ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

36 mins ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

42 mins ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

1 hour ago

ಸರ್ಕಾರ ರಾಜ್ಯದ ಜನರ ಭರವಸೆ ನುಚ್ಚು ನೂರು ಮಾಡಿದೆ: ವಿಜಯೇಂದ್ರ ಆಕ್ರೋಶ

ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ಗೆ ಆಡಳಿತ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ಮಾಡಿದ್ದಾರೆ.…

1 hour ago

ಧುರಂಧರ್‌-2 ಚಿತ್ರ ವೀಕ್ಷಿಸಿ ನಟಿ ರಮ್ಯಾ ಗರಂ: ಫ್ಯಾನ್ಸ್‌ಗೆ ಏನಂದು ಗೊತ್ತಾ?

ಬಹುನಿರೀಕ್ಷಿತ ಧುರಂಧರ್‌-2 ಸಿನಿಮಾ ಬಗ್ಗೆ ನಟಿ ರಮ್ಯಾ ಬರೆದಿರುವ ಟೂ ಪೇಜ್‌ ವಿಮರ್ಶೆ ಈಗ ಸೋಚಷಿಯಲ್‌ ಮೀಡಿಯಾದಲ್ಲಿ ಕಿಚ್ಚು ಹಬ್ಬಿಸಿದೆ.…

2 hours ago