c m siddaramaiah
ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿತು.
ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಈಗಾಗಲೇ ಬರೋಬ್ಬರಿ 500 ಕೋಟಿ ಜನರನ್ನು ತಲುಪಿದೆ. ಬಸ್‌ನಲ್ಲಿ ಕಂಡಕ್ಟರ್ ಆಗಿ ಟಿಕೆಟ್ ಹರಿದ ಸಿದ್ದರಾಮಯ್ಯ ಅವರು 500ನೇ ಕೋಟಿಯ ಟಿಕೆಟ್ ನೀಡಿದ್ದಾರೆ.
ಟಿಕೆಟ್ ವಿತರಿಸುವ ಮೂಲಕ ಶಕ್ತಿ ಯೋಜನೆಯ ಯಶಸ್ಸಿನ ಸಂಭ್ರಮಾಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ.
ಕುಮಾರಪಾರ್ಕ್ ಈಸ್ಟ್ ಬಳಿಯ ವಿಂಡ್ಸರ್ ವೃತ್ತದ ಬಳಿ ಕಾರ್ಯಕ್ರಮ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಸಾರಿಗೆ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ.20ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವ ಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್.11ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ವಿವರಿಸಿದರು.
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…