ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್‌ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸೇರಬೇಕಿದ್ದ ಹಣವನ್ನು ಲಪಟಾಯಿಸಿದ ಆರೋಪದಲ್ಲಿ ಐವರು ಬಸ್ ಕಂಡಕ್ಟರ್‌ಗಳನ್ನು ಅಮಾನತು ಮಾಡಲಾಗಿದೆ.
ಬಿಎಂಟಿಸಿ ಸೆಕ್ಯೂರಿಟಿ ಅಧಿಕಾರಿಗಳ ತಪಾಸಣೆ ವೇಳೆ ಈ ವಂಚನೆ ಬಯಲಾಗಿದ್ದು, ಒಟ್ಟು 1,82,568 ರೂಪಾಯಿ ವಂಚನೆಯಾಗಿರುವುದು ಪತ್ತೆಯಾಗಿದೆ. ಕನ್ನಡ ಓದಲು ಬಾರದ ಪ್ರಯಾಣಿಕರನ್ನು ಟಾರ್ಗೆಟ್ ಮಾಡಿ ವಂಚನೆ ಮಾಡುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಬೆಂಗಳೂರು ಡಿಪೋದ ಕಂಡಕ್ಟರ್ ಸೂರ್ಯನಾರಾಯಣ, ಬೊಮ್ಮಲಿಂಗೇಶ್, ಬ್ರಿಜೇಶ್ ಬಾಬು,ಮೋಹನ್,ಎನ್. ಪ್ರಕಾಶ್ ವಂಚನೆ ಪ್ರಕರಣದಲ್ಲಿ ಅಮಾನತುಗೊಂಡವರು.
ಈ ಕಂಡಕ್ಟರ್‌ಗಳು ಶಕ್ತಿ ಯೋಜನೆಯ ಉಚಿತ ಟಿಕೆಟ್‌ಗಳನ್ನು ಪುರುಷರಿಗೂ ಕೊಟ್ಟು ಹಣ ಪಡೆದು, ಅದನ್ನು ತಮ್ಮ ವೈಯಕ್ತಿಕ ಯುಪಿಐ ಖಾತೆಗಳಿಗೆ ವರ್ಗಾಯಿಸುತ್ತಿದ್ದರು. ತನಿಖೆ ವೇಳೆ ಅವರ ಬ್ಯಾಂಕ್ ಖಾತೆಗಳಲ್ಲಿ ಸಾವಿರಾರು ರೂಪಾಯಿ ಹಣ ಇರುವುದು ಕಂಡುಬಂದಿದೆ. ಬಿಎಂಟಿಸಿ ಈಗಾಗಲೇ ಐವರ ವಿರುದ್ಧ ಅಮಾನತು ಆದೇಶ ಹೊರಡಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಇದಕ್ಕೂ ಮುಂಚೆಯೂ ಇದೇ ರೀತಿಯ ವಂಚನೆಗೆ ಸಂಬಂಧಿಸಿ ಕೆಲವು ಕಂಡಕ್ಟರ್‌ಗಳನ್ನು ಅಮಾನತುಗೊಳಿಸಲಾಗಿತ್ತು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…